
ಬೆಳಗಾವಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆಯು ನಡೆಸಿದ ‘‘ಆಪರೇಷನ್ ಸಿಂದೂರ’’ ಜಂಟಿ ದಾಳಿಯ ವಿವರವನ್ನು ಲೆಫ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಷಿ ಹಾಗೂ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡಿದ್ದರು.

j3tvkannada
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆಯೂ ಹೌದು. ಜಿಲ್ಲೆಯ ಗೋಕಾಕ್ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿರುವ ತಾಜಾದ್ದೀನ್ ಬಾಗೇವಾಡಿ ಅವರನ್ನು ಮದುವೆಯಾಗಿದ್ದಾರೆ. ಇದೀಗ ಸೊಸೆಯ ಬಗ್ಗೆ ಮಾವ ಗೌಸ್ ಬಾಗೇವಾಡಿ ಜತೆ ಮಾತನಾಡಿ ಹರ್ಷ ವ್ಯಕ್ತಪಡಿಸಿದ್ದಾರೆ.