
ಬಳ್ಳಾರಿ : ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕಂಪ್ಲಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಬಳ್ಳಾರಿ ನಗರದ ಅಲ್ಪಸಂಖ್ಯಾತರ ಮೌಲನಾ ಆಜಾದ್ ಮಾದರಿ ಪದವಿ ಪೂರ್ವ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ, ಶಿಕ್ಷಕ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.

2025-26ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಅತಿಥಿ ಶಿಕ್ಷಕ ಮತ್ತು ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅತಿಥಿ ಶಿಕ್ಷಕರ ಹುದ್ದೆಗೆ ಬಿಎಸ್ಸಿ/ ಬಿಇಡಿ ಮತ್ತು ಅತಿಥಿ ಉಪನ್ಯಾಸಕರ ಹುದ್ದೆಗೆ ಎಂಎ/ ಬಿಇಡಿ ಅಥವಾ ಎಂಎಸ್ಸಿ/ ಬಿಇಡಿ ವಿದ್ಯಾರ್ಹತೆ ಹೊಂದಿದ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕಂಪ್ಲಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 7353346069 ಮತ್ತು 8861623814.
ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲನಾ ಆಜಾದ್ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯನ್ನು ಸಹ ಸಂಪರ್ಕಿಸಬಹುದು.