
ಚಿತ್ರದುರ್ಗ: ಇನ್ನೋವಾ ಕಾರು, ಲಾರಿಗೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಐವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಸಿಬಾರ ಗ್ರಾಮದಲ್ಲಿ ನಡೆದಿದೆ.
ದಾವಣಗೆರೆ-ಚಿತ್ರದುರ್ಗ ರಿಂಗ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟರೇ, ಓರ್ವನ ಸ್ಥಿತಿ ಗಂಭೀರವಾಗಿದೆ. ಸಿಬಾರ ಗ್ರಾಮದ ಹೋಟೆಲ್ವೊಂದರ ಬಳಿ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಲಾರಿಗೆ ಡಿಕ್ಕಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.