
j3tvkannada.in
ಹಾವೇರಿ: ಕಾಂಗ್ರೆಸ್ ಪಕ್ಷ ಬೆಳಗಾವಿಯಲ್ಲಿ ಆಯೋಜನೆ ಮಾಡಿದ್ದ ಗಾಂಧಿ ಭಾರತ ಸಮಾವೇಶದಲ್ಲಿ ಭಾಗಿಯಾಗಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತನಿಗೆ ಕೆಪಿಸಿಸಿ ವತಿಯಿಂದ 5 ಲಕ್ಷ ರೂ. ಪರಿಹಾರ ಚೆಕ್ ವಿತರಿಸಲಾಯಿತು.
ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ನದಿಹರಳಹಳ್ಳಿ ಗ್ರಾಮದ ಬಸಪ್ಪ, ಕೆಂಚಪ್ಪ, ಪಾಮೇನಹಳ್ಳಿ, ಎಂಬ ಕಾರ್ಯಕರ್ತ ಸಮಾವೇಶದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು.
ಮೃತರ ಕುಟುಂಬಸ್ಥರು ಪರಿಹಾರ ನೀಡುವಂತೆ ಶಾಸಕ ಪ್ರಕಾಶ್ ಕೋಳಿವಾಡಗೆ ಮನವಿ ಮಾಡಿದ್ದರು. ಶಾಸಕ ಪ್ರಕಾಶ್ ಕೋಳಿವಾಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಗಮನಕ್ಕೆ ತಂದು 5 ಲಕ್ಷ ರೂ. ಪರಿಹಾರ ನೀಡುವಲ್ಲಿ ಯಶಸ್ವಿಯಾಗಿದರು.
ಭಾನುವಾರ ಶಾಸಕ ಪ್ರಕಾಶ್ ಕೋಳಿವಾಡ ಮೃತರ ಕುಟುಂಬಕ್ಕೆ ಚೆಕ್ ವಿತರಿಸಿದರು.