
ರಾಮನಗರ: ಇತ್ತೀಚೆಗೆ ರಾಮನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಬೆಂಗಳೂರು ದಕ್ಷಿಣ ಜಿಲ್ಲೆಯಾಗುವುದರಿಂದ ಭೂಮಿಯ ಮೌಲ್ಯ ಹೆಚ್ಚಾಗಲಿದೆ, ಆಸ್ತಿ ಮಾರಾಟ ಮಾಡಬೇಡಿ ಎಂದು ಕರೆ ನೀಡಿದ್ದಾರೆ. ಗ್ರೇಟರ್ ಬೆಂಗಳೂರು ಯೋಜನೆ ಜಾರಿಗೆ ತಂದು ರೈತರಿಗೆ ನಾಲ್ಕು ಪಟ್ಟು ಪರಿಹಾರ ನೀಡಲಾಗುವುದು.

j3tvkannada
ಜನರ ಬದುಕು ಬದಲಾಗಲಿದೆ. ಇದು ನಮ್ಮ ಜಿಲ್ಲೆ, ನಮ್ಮ ಸ್ವಾಭಿಮಾನ. ಬೆಂಗಳೂರಿಗೆ ನಾವು ಹೋಗುವುದು ತಪ್ಪಿ, ನಮ್ಮಲ್ಲೇ ಎಲ್ಲಾ ಸೌಕರ್ಯಗಳು ಲಭ್ಯವಾಗುವ ಕಾಲ ಮುಂದಕ್ಕೆ ಬರಬೇಕು.
ಈ ಯೋಜನೆಯನ್ನು ಕೈ ಬಿಡಿ ಎಂದು ದೇವೆಗೌಡರು, ಸಂಸದ ಮಂಜುನಾಥ್ ಅವರು ಪತ್ರ ಬರೆದಿದ್ದರು. ಈ ಹಿಂದೆ ಇದಕ್ಕೆ ಸಹಿ ಹಾಕಿದವರು ಕುಮಾರಸ್ವಾಮಿ. ಆದರೆ ಅವರಿಗೆ ಇದನ್ನು ಮುಂದುವರೆಸಲು ಆಗುವುದಿಲ್ಲ. ಈಗ ನಾನೇಕೆ ಅದನ್ನು ಡಿನೋಟಿಫಿಕೇಷನ್ ಮಾಡಲಿ. ಕೇಸನ್ನು ಹಾಕಿಸಿಕೊಳ್ಳಲು ನಾನು ತಯಾರಿಲ್ಲ. ಯೋಗೇಶ್ವರ್, ಇಕ್ಬಾಲ್ ಅವರೆಲ್ಲಾ ಸೇರಿ ನಿಮ್ಮ ಬದುಕನ್ನು ಭದ್ರ ಮಾಡುತ್ತೇವೆ ಎಂದರು.
ಬೆಂಗಳೂರಿಗೆ ಹೊಸ ರೂಪ :-
ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ಬರಲಿದೆ. ನಂತರ ಸ್ವಚ್ಛತಾ ಅಭಿಯಾನದ ಮೂಲಕ ನಗರದಲ್ಲಿ ಕಸ ವಿಲೇವಾರಿ ಮಾಡಿ ಸ್ವಚ್ಛ ಬೆಂಗಳೂರು ನಿರ್ಮಿಸಲಾಗುವುದು. ಆ ಮೂಲಕ ಬೆಂಗಳೂರಿಗೆ ಹೊಸ ರೂಪ ನೀಡಲಾಗುವುದು ಎಂದು ಡಿ.ಸಿ.ಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು.
ನಂಬಿಕೆ ನಕ್ಷೆ ಯೋಜನೆ ಜಾರಿ:-
ಇಂದು ಶಂಕುಸ್ಥಾಪನೆ ಮಾಡಿರುವ ಯೋಜನೆ ಸುಮಾರು 30 ಸಾವಿರ ಮನೆಗಳು, 2.50 ಲಕ್ಷ ಜನರಿಗೆ ನೀರು ಪೂರೈಸಲಿದೆ. ಈ ಕ್ಷೇತ್ರದಲ್ಲಿ ರಸ್ತೆಗೆ 130 ಕೋಟಿ, ಮೇಲ್ಸೇತುವೆಗೆ 43 ಕೋಟಿ, 320 ಕೋಟಿ ಇತರೆ ವಾರ್ಡ್ ಅಭಿವೃದ್ಧಿಗೆ, 650 ಕೋಟಿ ವೆಚ್ಚದಲ್ಲಿ ಹೊಸ ಫ್ಲೈ ಓವರ್, ನಿಮ್ಮ ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ ನಿಮ್ಮ ಮನೆ ಬಾಗಿಲಿಗೆ ಉಚಿತವಾಗಿ ರವಾನಿಸಲಾಗುವುದು. ಇದನ್ನು ಸದ್ಯದಲ್ಲೇ ದೊಡ್ಡ ಆಂದೋಲನದ ರೀತಿಯಲ್ಲಿ ಮಾಡಲಾಗುವುದು. 50X80 ವಿಸ್ತೀರ್ಣದಲ್ಲಿ ಮನೆ ನಿರ್ಮಿಸಲು, ಅನುಮತಿಯನ್ನು ಪಡೆಯಲು ಕಚೇರಿಗೆ ಅಲೆಯುವುದನ್ನು ತಪ್ಪಿಸಲು ನಂಬಿಕೆ ನಕ್ಷೆ ಯೋಜನೆ ಜಾರಿ ಮಾಡಲಾಗುವುದು ಎಂದು ಹೇಳಿದರು.
ನಾವು ಕೊಟ್ಟ ಮಾತಿನಂತೆ ಯೋಜನೆಗಳನ್ನು ನೀಡುತ್ತಾ ಬಂದಿದ್ದೇವೆ. ಕೊಟ್ಟ ಭರವಸೆಗಳನ್ನು ಸರಿಯಾಗಿ ಈಡೇರಿಸಿಕೊಂಡು ಬಂದಿರುವ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ. ಈ ಹಿಂದೆ ಬಿ.ಜೆ.ಪಿ ಸರ್ಕಾರ ಇದ್ದಾಗ ನಿಮ್ಮ ಖಾತೆಗೆ 15 ಲಕ್ಷ ಹಾಕುತ್ತೇವೆ, ಅಚ್ಛೇದಿನ್ ಕೊಡುತ್ತೇವೆ ಎಂದು ಹೇಳಿದ್ದರಲ್ಲಾ ಕೊಟ್ಟರಾ? ಬಿ.ಜೆ.ಪಿ ಸರ್ಕಾರದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿ, ಆದಾಯ ಪಾತಾಳಕ್ಕೆ ಕುಸಿದ ಕಾರಣ ನಾವು ಈ ಗ್ಯಾರಂಟಿ ಯೋಜನೆ ನೀಡಿದ್ದೇವೆ. ಬೆಲೆ ಏರಿಕೆ ಮಧ್ಯೆ ನಿಮ್ಮ ಜೀವನ ಸುಗಮವಾಗಿ ಸಾಗಬೇಕು ಎಂದು ಈ ಯೋಜನೆ ನೀಡಿದ್ದೇವೆ ಎಂದು ಡಿ.ಕೆ ಶಿವಕುಮಾರ್ ಅವರು ಹೇಳಿದರು.