
j3tvkannada
ಬೆಂಗಳೂರು: ತುಮಕೂರು ಜಿಲ್ಲೆಯ ಸಿರಾ ಕೈಗಾರಿಕಾ ಪ್ರದೇಶದಲ್ಲಿ ಉಕ್ಕು ಉತ್ಪನ್ನಗಳ ಉತ್ಪಾದನಾ ಘಟಕವನ್ನು ಸ್ಥಾಪಿಸಲು ಕ್ರಿಸೋಡಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ಹೂಡಿಕೆ ಪ್ರಸ್ತಾವನೆಗೆ ರಾಜ್ಯ ಸರ್ಕಾರ (ಮಾ.9) ಭಾನುವಾರ ರಂದು ತಾತ್ವಿಕ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ.
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಈ ಉದ್ದೇಶಕ್ಕಾಗಿ ಜಿಲ್ಲೆಯಲ್ಲಿ 12 ಎಕರೆ ಭೂಮಿಯನ್ನು ಮಂಜೂರು ಮಾಡಲಿದೆ.
ಥರ್ಮೋ ಮೆಕ್ಯಾನಿಕಲಿ ಟ್ರೀಟೆಡ್ (TMT) ಬಾರ್ಗಳು, ರಾಡ್ಗಳು ಮತ್ತು ಉಕ್ಕು ಸಂಬಂಧಿತ ಉತ್ಪನ್ನಗಳನ್ನು ತಯಾರಿಸುವ ಈ ಘಟಕವು 138 ಕೋಟಿ ರೂ.ಗಳನ್ನು ಹೂಡಿಕೆ ಮಾಡಲು ಮುಂದಾಗಿದೆ. ಇದರಿಂದ ಸುಮಾರು 160 ಜನರಿಗೆ ಉದ್ಯೋಗ ಲಭಿಸುತ್ತದೆ ಎಂದು ಅಂದಾಜಿಸಲಾಗಿದೆ.