
ಬೆಂಗಳೂರು: ಬೆಳ್ಳಂಬೆಳಗ್ಗೆ ತೈಲದ ಗೋದಾಮು ಒಂದಕ್ಕೆ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದ ಘಟನೆ ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಬಳಿ ನಡೆದಿದೆ.

j3tvkannada
ತೈಲ ಗೋದಾಮು ಮಾಜಿ ಕಂದಾಯ ಸಚಿವ ಎಚ್.ಸಿ ಶ್ರೀಕಂಠಯ್ಯ ಅಳಿಯ ಕೃಷ್ಣಪ್ಪ ಎಂಬುವವರಿಗೆ ಸೇರಿದೆ ಎನ್ನಲಾಗಿದೆ. ಆದರೆ ಅದನ್ನು ಖಾಸಗಿ ಕಂಪನಿಗೆ ಬಾಡಿಗೆ ನೀಡಲಾಗಿತ್ತು. ಸರಿ ಸುಮಾರು 30 ಕೋಟಿ ರೂಪಾಯಿ ಮೌಲ್ಯದ ತೈಲ ಬೆಂಕಿಗಾಹುತಿಯಾಗಿರುವ ಶಂಕೆ ವ್ಯಕ್ತವಾಗಿದೆ. 40,000 ಚದರ ಅಡಿಯ ಗೋದಾಮು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.
ಶಾರ್ಟ್ ಸರ್ಕ್ಯೂಟ್ನಿಂದ ತೈಲ ಗೋದಾಮಿಗೆ ಬೆಂಕಿ:-
ಇಂದು (ಮೇ13) ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದ ತೈಲ ಶೇಖರಿಸಿಟ್ಟಿದ್ದ ಗೋದಾಮಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ಈ ವಿಷಯ ತಿಳಿದ ಕೂಡಲೇ ನೆಲಮಂಗಲ, ಪೀಣ್ಯಾ, ಯಶವಂತಪುರ ಭಾಗದ 8ಕ್ಕೂ ಹೆಚ್ಚು ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಸುಮಾರು 20 ಕ್ಕೂ ಹೆಚ್ಚು ಅಗ್ನಿಶಾಮಕ ತಂಡದಿಂದ ಬೆಂಕಿ ನಂದಿಸುವ ಕಾರ್ಯ ಮುಂದುವರೆಯಿತು.
ನೀರಿನ ಕೊರತೆ ಬೆಂಕಿ ನಂದಿಸಲು ಹರಸಾಹಸ:-
ಬೆಂಕಿಯು ಕ್ಷಣ ಕ್ಷಣಕ್ಕೂ ಹರಡುತ್ತಿದ್ದು, ಸುತ್ತಮುತ್ತಲಿನ ಗೋದಾಮುಗಳು ಮತ್ತು ಮನೆಗಳಿಗೆ ತಗುಲುವ ದಿಗಿಲು ಹುಟ್ಟಿಸಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ ಹಿನ್ನೆಲೆ, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿಯ ಅವಘಡಕ್ಕೆ ಕಾರಣ ಏನು ಎಂಬುದರ ಬಗ್ಗೆ ಮಾಹಿತಿ ಪತ್ತೆ ಮಾಡಲಾಗುತ್ತಿದೆ.
ಭಾರತ ಪಾಕಿಸ್ತಾನ ನಡುವಿನ ಯುದ್ಧ ಆರಂಭ ಹಿನ್ನೆಲೆ ಹೆಚ್ಚಿನ ಸ್ಟಾಕ್ ಶೇಖರಣೆ ಮಾಡಲಾಗಿತ್ತು. ಯುದ್ಧದ ಪರಿಣಾಮವಾಗಿ ಕರ್ನಾಟಕದಲ್ಲಿ ಯಾವುದೇ ತೈಲದ ಸಮಸ್ಯೆ ಬಾರದಂತೆ ಸಂಗ್ರಹಣೆ ಮಾಡಲಾಗಿತ್ತು. ಬೆಂಕಿಯ ಅವಘಡದಿಂದಾಗಿ ಸಾವು ನೋವಾಗಿರುವ ಬಗ್ಗೆ ಇನ್ನೂ ಯಾವುದೇ ಮಾಹಿತಿ ಸಿಕ್ಕಿಲ್ಲ.