
ವಿಜಯಪುರ : ಕರ್ನಾಟಕದಾದ್ಯಂತ ಬೆಳ್ಳಂಬೆಳಗ್ಗೆ ಏಳು ಭಷ್ಟ್ರ ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಅಕ್ರಮ ಆಸ್ತಿ ಗಳಿಕೆ ದೂರುಗಳು ಬಂದ ಹಿನ್ನೆಲೆ ದಾಳಿ ಮಾಡಿರುವ ಲೋಕಾ, ಅಧಿಕಾರಿಗಳ ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ರಾಜ್ಯದ ಹಲವೆಡೆ ಏಕಕಾಲಕ್ಕೆ ದಾಳಿ ಮಾಡುವ ಮೂಲಕ ಶಾಕ್ ನೀಡಲಾಗಿದೆ.

j3tvkannada
ಎಲ್ಲೆಲ್ಲಿ ದಾಳಿ:–
ಬೆಂಗಳೂರಿನ 12, ತುಮಕೂರಿನ 7, ಬೆಂಗಳೂರು ಗ್ರಾಮಾಂತರ 8, ಯಾದಗಿರಿ 5, ಮಂಗಳೂರಿನ 4, ಮತ್ತು ವಿಜಯಪುರದ 4 ಕಡೆ ಲೋಕಾಯುಕ್ತ ದಾಳಿ ಮಾಡಿದೆ.
ಯಾರ ಮೇಲೆ ದಾಳಿ:-
1. ರಾಜಶೇಖರ್: ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ ತುಮಕೂರು.
2. ಮಂಜುನಾಥ್: ಸರ್ವೆ ಸೂಪರ್ವೈಸರ್, ಮಂಗಳೂರು.
3. ಶ್ರೀಮತಿ ರೇಣುಕಾ: ಡಾ.ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧಿಕಾರಿ ವಿಜಯಪುರ.
4. ಮುರಳಿ ಟಿವಿ: ಹೆಚ್ಚುವರಿ ನಿರ್ದೇಶಕರು, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯ, ಬೆಂಗಳೂರು.
5. ಹೆಚ್ಆರ್ ನಟರಾಜ್: ಇನ್ಸ್ಪೆಕ್ಟರ್, ಕಾನೂನು ಮಾಪನಶಾಸ್ತ್ರ ಬೆಂಗಳೂರು.
6. ಅನಂತ್ ಕುಮಾರ್: SDA, ಹೊಸಕೋಟೆ ತಾಲೂಕು ಕಛೇರಿ ಬೆಂಗಳೂರು ಗ್ರಾಮಾಂತರ.
7. ಉಮಾಕಾಂತ್: ಶಹಾಪುರ ತಾಲೂಕು ಕಚೇರಿ ಯಾದಗಿರಿ.
ಅಕ್ರಮ ಆಸ್ತಿ ಸಂಪಾದನೆ ಆರೋಪ:–
ವಿಜಯಪುರ ನಗರದ ಸೆಂಟ್ ಜೋಸೆಫ್ ಶಾಲೆಯ ಹಿಂಭಾಗದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ ಸಾತಾರ್ಲೆ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ಎಸ್.ಪಿ ಟಿ. ಮಲ್ಲೇಶ್ ಹಾಗೂ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಸೊಲ್ಲಾಪುರ ನಗರದ ಕೆ.ಹೆಚ್.ಬಿ ಪ್ರದೇಶದಲ್ಲಿರುವ ನಿವಾಸದ ಮೇಲೂ ಡಿ.ವೈ.ಎಸ್.ಪಿ ಸುರೇಶ ರೆಡ್ಡಿ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲನೆ ಮಾಡಲಾಗಿದೆ.