ಶಿವಮೊಗ್ಗ: ಇದೀಗ ಬೆಂಗಳೂರು-ಶಿವಮೊಗ್ಗ ಸೇರಿದಂತೆ ವಿವಿಧ ನಗರಗಳಿಗೆ ವಿಮಾನಗಳು ಹಾರಾಟ ನಡೆಸುತ್ತಿವೆ. ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮವು ನಿರ್ವಹಣೆ ಮಾಡುತ್ತಿರುವ ರಾಜ್ಯದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಯನ್ನು ಶಿವಮೊಗ್ಗ ವಿಮಾನ ನಿಲ್ದಾಣ ಹೊಂದಿದೆ. ನಿಲ್ದಾಣವನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ)ಕ್ಕೆ ವಹಿಸುವ ಕುರಿತು ಚರ್ಚೆಗಳು ನಡೆಯುತ್ತಿವೆ.

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸ್ಟಾರ್ ಏರ್, ಇಂಡಿಗೋ ಸ್ಪೈಸ್ ಜೆಟ್ ಸಂಸ್ಥೆಗಳು ವಿಮಾನ ಸೇವೆಯನ್ನು ಒದಗಿಸುತ್ತಿವೆ. ಪ್ರತಿ ನಿತ್ಯ 6 ವಿಮಾನಗಳು 12 ಬಾರಿ ಬಂದು ಹೋಗುತ್ತವೆ. ಬೆಂಗಳೂರು, ಹೈದರಾಬಾದ್, ಗೋವಾ, ತಿರುಪತಿ ಮತ್ತು ಚೆನ್ನೈಗೆ ಶಿವಮೊಗ್ಗದಿಂದ ವಿಮಾನ ಸೇವೆ ಇದೆ. ಬೆಂಗಳೂರು-ಶಿವಮೊಗ್ಗ ಮತ್ತು ಶಿವಮೊಗ್ಗ, ಹೈದರಾಬಾದ್ ಮಾರ್ಗಕ್ಕೆ ಹೆಚ್ಚಿನ ಬೇಡಿಕೆ ಇದೆ. ವಿಮಾನ ನಿಲ್ದಾಣದಲ್ಲಿ ರಾತ್ರಿ ವಿಮಾನಗಳನ್ನು ಲ್ಯಾಂಡ್ ಮಾಡುವ ಕಾಮಗಾರಿ ಕೈಗೊಳ್ಳಲಾಗಿತ್ತು. ಅದನ್ನು ಈಗ ಪೂರ್ಣಗೊಳಿಸಲಾಗಿದೆ. ಆದರೆ ಎಎಐ ಅಧಿಕಾರಿಗಳ ತಂಡ ಅದನ್ನು ಪರಿಶೀಲನೆ ಮಾಡಿ ಒಪ್ಪಿಗೆ ನೀಡಿದ ಬಳಿಕ ಶಿವಮೊಗ್ಗಕ್ಕೆ ರಾತ್ರಿಯೂ ವಿಮಾನಗಳು ಆಗಮಿಸಬಹುದು. ಬಳಿಕ ಶಿವಮೊಗ್ಗ-ದೆಹಲಿ, ಶಿವಮೊಗ್ಗ-ಮುಂಬೈ ಮತ್ತು ಶಿವಮೊಗ್ಗ-ಇಂಧೋರ್ ನಡುವೆ ವಿಮಾನ ಸೇವೆ ಆರಂಭವಾಗುವ ನಿರೀಕ್ಷೆ ಇದೆ.
ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮವು ವಿಮಾನ ನಿಲ್ದಾಣ ನಿರ್ವಹಣೆ ನೋಡಿಕೊಳ್ಳುತ್ತಿದೆ. 273 ಜನರಿಗೆ ಉದ್ಯೋಗ ಸಿಕ್ಕಿದೆ. ಇದುವರೆಗೂ ವಿಮಾನ ನಿಲ್ದಾಣ ನಿರ್ವಹಣೆ ಮಾಡಲು 8.5 ಕೋಟಿ ಖರ್ಚಾಗಿದ್ದು, 2.86 ಕೋಟಿ ಆದಾಯ ಬಂದಿದೆ. ವಿವಿಧ ಮಾರ್ಗದಲ್ಲಿ ವಿಮಾನಗಳ ಹಾರಾಟ, ವಾಣಿಜ್ಯ ಸೇವೆಗಳು ಆರಂಭವಾದರೆ ಶಿವಮೊಗ್ಗ ವಿಮಾನ ನಿಲ್ದಾಣದ ಆದಾಯ ಹೆಚ್ಚಾಗಲಿದೆ ಎಂದು ಅಂದಾಜಿಸಲಾಗಿದೆ. ಈಗ ನಿರ್ವಹಣಾ ವೆಚ್ಚ ಅಧಿಕವಾಗುತ್ತಿರುವ ಹಿನ್ನಲೆಯಲ್ಲಿ ವಿಮಾನ ನಿಲ್ದಾಣವನ್ನು ಕೇಂದ್ರಕ್ಕೆ ಹಸ್ತಾಂತರ ಮಾಡುವ ಕುರಿತು ಚರ್ಚೆಗಳು ನಡೆಯುತ್ತಿವೆ. ಶಿವಮೊಗ್ಗ ವಿಮಾನ ನಿಲ್ದಾಣದ ಪ್ಯಾಸೆಂಜರ್ ಟರ್ಮಿನಲ್ ಬಿಲ್ಡಿಂಗ್ ಪೀಕ್ ಅವರ್ನಲ್ಲಿ ಸುಮಾರು 300 ಪ್ರಯಾಣಿಕರನ್ನು ನಿರ್ವಹಣೆ ಮಾಡುವ ರೀತಿ ವಿನ್ಯಾಸಗೊಳಿಸಲಾಗಿದೆ. ರನ್ವೇ, ಏಪ್ರನ್, ಐಸೋಲೇಶನ್ ಬೇ, ಟ್ಯಾಕ್ಸಿವೇ ಮತ್ತು ಇತರ ಮೂಲ ಸೌಕರ್ಯ ಸೌಲಭ್ಯಗಳಿವೆ. ಏರ್ಬಸ್-320 ಮಾದರಿಯ ವಿಮಾನಗಳ ಕಾರ್ಯಾಚರಣೆಗಾಗಿ ರನ್ ವೇ ವಿನ್ಯಾಸಗೊಳಿಸಲಾಗಿದೆ.
ವಿ