
ಮೈಸೂರು: ಪೌರಕಾರ್ಮಿಕರು, ಮಾವುತರ ಮಕ್ಕಳು ಹಿಮಾಲಯ ಪರ್ವತಕ್ಕೆ ಚಾರಣ ಕೈಗೊಂಡಿದ್ದಾರೆ. ಮೌಂಟ್ ಕುವಾರಿ ಪಾಸ್ ಏರುವುದರ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಮೈಸೂರಿನ ಎಂಟು ಪೌರಕಾರ್ಮಿಕರ ಮಕ್ಕಳು, ಮಾವುತರು, ಅರಣ್ಯ ರಕ್ಷಕರು ಮತ್ತು ಇತರ ನಾಗರೀಕರ ತಂಡ ಸಾಧನೆ ಮಾಡಿದೆ. ಉತ್ತರಾಖಂಡದ 13,990 ಅಡಿ ಎತ್ತರದ ಮೌಂಟ್ ಕುವಾರಿ ಪಾಸ್ನ್ನು ಮಕ್ಕಳು ಹತ್ತಿದ್ದಾರೆ. ಮೈಸೂರಿನ ಟೈಗರ್ ಅಡ್ವೆಂಚರ್ ಫೌಂಡೇಶನ್, ದಿ ಮೌಂಟೇನ್ ಗೋಟ್ ಸಹಯೋಗದೊಂದಿಗೆ ಸಾಹಸ ಯಾತ್ರೆ ಕೈಗೊಂಡಿದ್ದರು. ಜುನೂನ್-2025 ಎಂಬ ಹೆಸರಿನಲ್ಲಿ ಯಾತ್ರೆ ಮಾಡಲಾಗಿತ್ತು.

j3tvkannada
ಮರಿಮಲ್ಲಪ್ಪ ಪಿಯು ಕಾಲೇಜಿನ ಉಪನ್ಯಾಸಕ ಅನಿಲ್ ಕುಮಾರ್ ನೇತೃತ್ವದಲ್ಲಿ 24 ಜನರ ತಂಡದಲ್ಲಿ ಪೌರಕಾರ್ಮಿಕರ ಮಕ್ಕಳು, ಹುಣಸೂರು ಅರಣ್ಯ ವಿಭಾಗದ ಮಾವುತರು, ಅರಣ್ಯ ಬೀಟ್ ಗಾರ್ಡ್ಗಳು, ಗೃಹಿಣಿಯರು ಮತ್ತು ಶಾಶ್ವತ ಸೇವಾ ಸಮಾಜ ಶಾಲೆಯ ವಿದ್ಯಾರ್ಥಿಗಳಿಂದ ಪರ್ವತಾರೋಹಣ ನಡೆದಿದೆ. ಮೇ 1 ರಂದು, ಭಾರತೀಯ ತ್ರಿವರ್ಣ ಧ್ವಜವನ್ನು ಕುವಾರಿಯ ಮೇಲೆ ಹಾರಿಸಿದ ಚಾರಣಿಗರು. ಭಾರತದ ಸಾಹಸ ಇತಿಹಾಸದಲ್ಲಿ ಪೌರಕಾರ್ಮಿಕರ ಮಕ್ಕಳು, ಅರಣ್ಯ ಕಾವಲುಗಾರರು ಮತ್ತು ಮಾವುತರು ಮಾಡಿದ ಮೊದಲ ಪರ್ವತಾರೋಹಣ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪಾಕಿಸ್ತಾನದ ವಿರುದ್ಧ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಮೇಲುಗೈ ಸಾಧಿಸಿದ ಹಿನ್ನೆಲೆಯಲ್ಲಿ ಭಾರತೀಯ ಸೇನೆಯನ್ನು ಅಭಿನಂದಿಸುವ ಸಲುವಾಗಿ ಮೈಸೂರಿನಲ್ಲಿ ತಿರಂಗಾಯಾತ್ರೆ ಆಯೋಜನೆ ಮಾಡಲಾಗಿತ್ತು.
ಮೈಸೂರಿನ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ವೃತ್ತದಲ್ಲಿ ತಿರಂಗಾ ಯಾತ್ರೆಗೆ ಚಾಲನೆ ನೀಡಲಾಯಿತು. ಶ್ರೀರಾಮಪೇಟೆಯ ವಿನೋಬಾ ರಸ್ತೆ, ಚಿಕ್ಕಗಡಿಯಾರವೃತ್ತ, ದೇವರಾಜ ಅರಸು ರಸ್ತೆ, ಜೆ ಎಲ್ ಬಿ ರಸ್ತೆ ಮೂಲಕ ಸಾಗಿ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ವೃತ್ತದಲ್ಲಿ ತಿರಂಗಾಯಾತ್ರೆ ಅಂತ್ಯವಾಯಿತು. ಪಕ್ಷಾತೀತವಾಗಿ ನಡೆದ ತಿರಂಗಾ ಯಾತ್ರೆ ನಡೆಯಿತು. ಸುತ್ತೂರು ಮಠಾಧಿಪತಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಅವಧೂತ ದತ್ತ ಪೀಠಾಧಿಪತಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಕಿರಿಯ ಶ್ರೀಗಳಾದ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿ, ಆದಿಚುಂಚನಗಿರಿ ಶಾಖಾ ಮಠದ ಪೀಠಾಧಿಪತಿ ಶ್ರೀ ಸೋಮನಾಥ ಸ್ವಾಮೀಜಿ, ಕ್ರೈಸ್ತ ಧರ್ಮಗುರುಗಳು, ಮುಸ್ಲಿಂ ಧರ್ಮಗುರುಗಳು, ಹಲವಾರು ಮಾಜಿ ಸೈನಿಕರು, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಶ್ರೀವತ್ಸ, ಎಂಎಲ್ಸಿ, ಸಿ ಎನ್ ಮಂಜೇಗೌಡ, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಎಲ್ ನಾಗೇಂದ್ರ ಸೇರಿದಂತೆ ಹಲವಾರು ಪ್ರಮುಖರು ತಿರಂಗಾ ಯಾತ್ರೆಯಲ್ಲಿ ಭಾಗಿಯಾಗಿದ್ದರು. ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪನವರ ಪ್ರತಿಮೆಗೆ ಗಣ್ಯರು ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಕೆ ಮಾಡಿ, ಮೈಸೂರಿನ ವಿವಿಧೆಡೆಗಳಿಂದ ಆಗಮಿಸಿದ್ದ ಸಾವಿರಾರು ನಾಗರೀಕರು ತಿರಂಗಾ ಯಾತ್ರೆಯಲ್ಲಿ ಭಾಗಿಯಾಗಿದ್ದರು.