
ಬೆಂಗಳೂರು : ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಇನ್ನೂ 5 ದಿನ ಮಳೆ ಹೆಚ್ಚಾಗಲಿದೆ. ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಮತ್ತು ಕರ್ನಾಟಕದ ಇತರ 22 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮೇ 22 ರವರೆಗೆ ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ನೀಡಲಾಗಿದೆ. ಮುಂದಿನ ಕೆಲವು ದಿನಗಳವರೆಗೆ ಭಾರತದ ಹಲವು ಭಾಗಗಳಲ್ಲಿ ಭಾರೀ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

j3tvkannada
ಬೆಂಗಳೂರು ಸೇರಿದಂತೆ ಕರ್ನಾಟಕದ 22 ಜಿಲ್ಲೆಗಳಲ್ಲಿ ಇಂದಿನಿಂದ 5 ದಿನ ಮಳೆ ಹೆಚ್ಚಾಗಲಿದೆ. ಈ ಜಿಲ್ಲೆಗಳಲ್ಲಿ ಮೇ 22ರವರೆಗೆ ಮಿಂಚು ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದ್ದು, ಹಳದಿ ಅಲರ್ಟ್ ನೀಡಿದೆ. ತೆಲಂಗಾಣದಿಂದ ಉತ್ತರ ತಮಿಳುನಾಡಿನವರೆಗೆ ವಿಸ್ತರಿಸಿರುವ ವಾಯುಭಾರ ಕುಸಿತದಿಂದಾಗಿ ಈ ಮಳೆ ಕಾಣಿಸಿಕೊಳ್ಳುತ್ತಿದೆ.
ಮುಂದಿನ 5 ದಿನಗಳಲ್ಲಿ ದೇಶದ ಹಲವಾರು ಪ್ರದೇಶಗಳಲ್ಲಿ ನಿರಂತರ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಐ.ಎಂ.ಡಿ ವಿಜ್ಞಾನಿ ಅಖಿಲ್ ಶ್ರೀವಾಸ್ತವ, ದಕ್ಷಿಣ ಭಾರತ ಅದರಲ್ಲೂ ವಿಶೇಷವಾಗಿ ತಮಿಳುನಾಡು, ಕೇರಳ ಮತ್ತು ಕರ್ನಾಟಕ ರಾಜ್ಯಗಳು ಮುಂದಿನ 5 ದಿನಗಳವರೆಗೆ ಗುಡುಗು ಸಹಿತ ಮತ್ತು ಬಿರುಗಾಳಿಯೊಂದಿಗೆ ನಿರಂತರ ಮಳೆಯನ್ನು ಅನುಭವಿಸಲಿವೆ ಎಂದು ಹೇಳಿದ್ದಾರೆ. ಮಧ್ಯ ಭಾರತದ ಮೇಲೂ ಇದೇ ರೀತಿಯ ಹವಾಮಾನ ಪರಿಸ್ಥಿತಿಗಳು ಮುಂದುವರಿಯುವ ನಿರೀಕ್ಷೆಯಿದೆ.