
ಬಳ್ಳಾರಿ: ಬಳ್ಳಾರಿ ಮತ್ತು ಕೊಡಗು ಜಿಲ್ಲೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿ ಇದೆ. ಬಳ್ಳಾರಿಯಲ್ಲಿ ಮೇ 21 ರಂದು ಮಿನಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಕೊಡಗಿನಲ್ಲಿ ಅಂದು ನೇರ ಸಂದರ್ಶನವಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.

j3tvkannada
ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ವತಿಯಿಂದ ಮೇ 21 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ತನಕ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಈ ಮೇಳದಲ್ಲಿ 3 ರಿಂದ 4 ಕಂಪನಿಗಳು ಭಾಗವಹಿಸುತ್ತಿದ್ದು, ತಮ್ಮಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿವೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಪುರುಷರು ಮತ್ತು ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದು. ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ ಪ್ರತಿಗಳೊಂದಿಗೆ ಆಗಮಿಸಬೇಕು. ಉದ್ಯೋಗ ಮೇಳ ನಗರದ ಹಳೇ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 9742718891, 9663263086, 9900827768, 6360408094 ಸಂಖ್ಯೆಗೆ ಕರೆ ಮಾಡಬಹುದು.