
ನೆಲಮಂಗಲ : ವೀಕೆಂಡ್ ಮುಗಿಸಿಕೊಂಡು ಜನರು ಬೆಂಗಳೂರಿಗೆ ವಾಪಸಾಗುತ್ತಿದ್ದರು. ಇದರಿಂದ ನೆಲಮಂಗಲ ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು. ನೆಲಮಂಗಲದ ಕುಣಿಗಲ್ ಬೈಪಾಸ್ ಬಳಿ ಸಂಚಾರ ದಟ್ಟಣೆ ಉಂಟಾಗಿತ್ತು. ಕುಣಿಗಲ್ನಿಂದ ನೆಲಮಂಗಲ ಹಾಗೂ ತುಮಕೂರಿನಿಂದ ನೆಲಮಂಗಲ ಕಡೆ ಸೇರುವ ಜಂಕ್ಷನ್ ಒಂದೇ ಆಗಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. ಟ್ರಾಫಿಕ್ ಜಾಮ್ನಿಂದ ವಾಹನ ಸವಾರರು ಗಂಟೆಗಟ್ಟಲೆ ರಸ್ತೆ ಮೇಲೆ ನಿಲ್ಲುವಂತಾಗಿತ್ತು.

- www.j3tvkannada.in
ಕೆಲವು ಗಂಟೆಗಳ ಕಾಲ ಸತತ ಸುರಿದ ಮಳೆಯಿಂದ ನೆಲಮಂಗಲ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆ ಜಲಾವೃತಗೊಂಡಿದ್ದು. ರಾಷ್ಟ್ರೀಯ ಹೆದ್ದಾರಿ ಅಂಡರ್ಪಾಸ್ಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ನೆಲಮಂಗಲ ಬಳಿಯ ಅಡಕಮಾರನಹಳ್ಳಿಯ ಜೈನ್ ಟೆಂಪಲ್ ಬಳಿ ರಸ್ತೆ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡಿದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಕೂಡ ಉಂಟಾಗಿತ್ತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ 3 ಕಾರುಗಳು ಮತ್ತು ಒಂದು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿರುವಂತಹ ಘಟನೆ ನಡೆದಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತದಿಂದ ಅರ್ಧ ಕಿಲೋ ಮೀಟರ್ವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು.