
ಬೆಳಗಾವಿ: 15 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತರು ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

j3tvkannada
ರಾಜ್ಯದ ಬೇರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿ.ಪಿ.ಐ ಪುತ್ರ ಸೇರಿ ಅಪ್ರಾಪ್ತ ಆರೋಪಿಯನ್ನು ಬಂಧಿಸಲಾಗಿದೆ. ರೆಸಾರ್ಟ್ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಳಗಾವಿಯ ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ.
ಸಾಕೀಬ್ ಮತ್ತು ಇಬ್ಬರು ಅಪ್ರಾಪ್ತರು ಬಾಲಕಿಯ ಮೇಲೆ ಅತ್ಯಾಚಾರ ಮಾಡಿರುವ ಆರೋಪ ಕೇಳಿ ಬಂದಿದೆ. ಅಪ್ರಾಪ್ತರಿಗೆ ರೆಸಾರ್ಟ್ ಕೊಟ್ಟ ಆರೋಪದಡಿ ರೋಹನ್ ಪಾಟೀಲ್ ಹಾಗೂ ಅಶುತೋಷ್ ಪಾಟೀಲ್ ಇಬ್ಬರನ್ನು ಬಂಧಿಸಿ ಈಗಾಗಲೇ ಪೊಲೀಸರು ಹಿಂಡಲಗಾ ಜೈಲಿಗೆ ಕಳಿಸಿದ್ದಾರೆ.
ಆರೋಪಿಗಳು ಮನೆಯೊಂದನ್ನು ಬಾಡಿಗೆಗೆ ಪಡೆದು ತಿಂಗಳಿಗೆ 20 ಸಾವಿರ ಬಾಡಿಗೆ ಪಡೆದ ಮನೆಯನ್ನು ರೆಸಾರ್ಟ್ ಆಗಿ ಪರಿವರ್ತನೆ ಮಾಡಿದ್ದರು.
ಏನಿದು ಪ್ರಕರಣ:-
ಸಾಕೀಬ್ ಹಾಗೂ ಇಬ್ಬರು ಅಪ್ರಾಪ್ತರು ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದರು. ಸಾಕೀಬ್ ತನ್ನ ಹೆಸರಲ್ಲಿ ರೂಮ್ ಬುಕ್ ಮಾಡಿದ್ದ. ಬಾಲಕಿಯ ಸ್ನೇಹಿತನಾಗಿರುವ ಅಪ್ರಾಪ್ತ ಆಕೆಯನ್ನು ಕರೆದುಕೊಂಡು ರೂಮಿಗೆ ಹೋಗಿದ್ದು, ಮೂವರು ಸೇರಿಕೊಂಡು ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದರು. ಮನೆಗೆ ವಾಪಸ್ ಬಂದ ಬಳಿಕ ಬಾಲಕಿ ಹೊಟ್ಟೆ ನೋವು ಎಂದಿದ್ದಳು. ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.