
ಗದಗ : ಕಾಂಗ್ರೆಸ್ನ ಒಂದು ಗುಂಪು ಪರಮೇಶ್ವರ್ ಮೇಲೆ ಕ್ರಮ ಆಗಬೇಕು ಅಂತ ಇಡಿಗೆ ಎಲ್ಲಾ ಮಾಹಿತಿ ನೀಡಿದೆ. ಯಾರು ಕಳುಹಿಸಿದ್ದು ಅಂತಾ ಸಿದ್ದರಾಮಯ್ಯ ಅವರಿಗೂ ಗೊತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಫೋಟಕ ಹೇಳಿಕೆ ನೀಡಿದರು.

j3tvkannada
ಗೃಹಸಚಿವ ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆಯ ಮೇಲೆ ಇಡಿ ದಾಳಿ ಕುರಿತು ಗದಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2013ರಲ್ಲಿ ಪರಮೇಶ್ವರ್ ಅವರನ್ನು ಸೋಲಿಸಿದ್ದು ಯಾರು ಇದೇ ಸಿದ್ದರಾಮಯ್ಯ ಅವರು ಪರಮೇಶ್ವರ್ ಅವರನ್ನು ಸೋಲಿಸಿದ್ದು, ಇದು ಜಗತ್ ಜಾಹಿರ ವಿಚಾರ. ಸಿದ್ದರಾಮಯ್ಯನವರೇ, ಜನರು ಇತಿಹಾಸವನ್ನು ಅಷ್ಟು ಬೇಗ ಮರೆಯೋದಿಲ್ಲ ಎಂದು ಟಾಂಗ್ ಕೊಟ್ಟರು.
ಗೋಲ್ಡ್ ಸ್ಮಗ್ಲಿಂಗ್ನಿಂದ ಹಿಡಿದು ಎಲ್ಲಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಇ.ಡಿ ಗೆ ಪತ್ರ ಬರೆಯುತ್ತಿದ್ದವರು ಯಾರು ಕಾಂಗ್ರೆಸ್ನ ಒಂದು ಗುಂಪು ಪರಮೇಶ್ವರ್ ಮೇಲೆ ಕ್ರಮ ಆಗಬೇಕು ಎಂದು ಇ.ಡಿ ಗೆ ಎಲ್ಲಾ ಮಾಹಿತಿ ಕಳುಹಿಸುತ್ತಾರೆ. ಇಷ್ಟೆಲ್ಲಾ ಮಾಡಿ ಈಗ ಡ್ರಾಮ ಮಾಡ್ತಿದ್ದೀರಾ ಎಂದು ಕಿಡಿಕಾರಿದರು.
ಪರಮೇಶ್ವರ್ ಬಗ್ಗೆ ನಮಗೆ ಗೌರವ ಇದೆ. ಅವರು ಒಬ್ಬ ಸಭ್ಯ ರಾಜಕಾರಣಿ. ಕಾಂಗ್ರೆಸ್ನ ಒಂದು ಗುಂಪಿನವರು ಮಾಹಿತಿಗಳನ್ನೆಲ್ಲಾ ಇ.ಡಿ ಗೆ ಕಳುಹಿಸಿದ್ದು. ಯಾರು ಕಳುಹಿಸಿದ್ದು ಅಂತ ಸಿದ್ದರಾಮಯ್ಯ ಅವರಿಗೂ ಗೊತ್ತಿದೆ. ಗುಪ್ತಚರ ಇಲಾಖೆ ಅವರ ಬಳಿ ಇದೆ. ಅವರ ಬಳಿ ಕೇಳಿದ್ರೆ ಯಾರು ಅಂತ ಹೇಳ್ತಾರೆ. ಇಂತಹ ಮಾಹಿತಿ ಸಿಕ್ಕಾಗ ಇ.ಡಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತದೆ ಎಂದರು.
ಇವರೇ ಮಾಹಿತಿಯನ್ನು ಬೇಕಂತಲೆ ಕೊಟ್ಟಿದ್ದಾರೆ. ಇ.ಡಿ ಕರ್ತವ್ಯದಂತೆ ತನಿಖೆ ಮಾಡ್ತಿದೆ. ಪರಮೇಶ್ವರ್ಗೆ ತೊಂದರೆ ಕೊಡಬೇಕು ಎಂಬ ಯಾವ ಉದ್ದೇಶವೂ ಕೇಂದ್ರ ಸರ್ಕಾರಕ್ಕೆ ಇಲ್ಲ. ಕಾನೂನು ಪ್ರಕಾರ ತಪ್ಪು ಮಾಡಿದ್ರೆ. ನಾನೇ ತಪ್ಪು ಮಾಡಲಿ, ಸಿದ್ದರಾಮಯ್ಯ, ಪರಮೇಶ್ವರ್ ತಪ್ಪು ಮಾಡಲಿ. ನಮ್ಮ ಪಕ್ಷದವರು ಇನ್ಯಾರೇ ತಪ್ಪು ಮಾಡಿದ್ರೂ ಅವರ ಮೇಲೆ ಕಾನೂನು ಪ್ರಕಾರ ಕ್ರಮ ಆಗುತ್ತೆ. ಎಲ್ಲದಕ್ಕೂ ರಾಜಕಾರಣ ಬೆರಸಿದ್ರೆ, ನಿಮ್ಮ ಪಕ್ಷದವರು ಏನೇನು ಮಾಡಿದ್ದಾರೆಂಬುದು ಮುಂದೆ ನಿಮಗೇ ತೊಂದರೆ ಆಗುತ್ತದೆ ಎಂದು ಟಾಂಗ್ ಕೊಟ್ಟರು.