
ಬೆಳಗಾವಿ: ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವೀರಕುಮಾರ ಪಾಟೀಲ ಪುತ್ರ ಪ್ರೀತಮ್ನನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.

j3tvkannada
ಸಚಿವ ಸತೀಶ ಜಾರಕಿಹೊಳಿ ಆಪ್ತ ಹಾಗೂ ಮಾಜಿ ಸಚಿವ ವೀರಕುಮಾರ ಪಾಟೀಲ ಅವರ ಪುತ್ರ ಪ್ರೀತಮ್ ಬಂಧಿತ ಆರೋಪಿ. ವೈಷ್ಣವಿ ಹಗವಣೆ ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಾದ ವೈಷ್ಣವಿ ಮಾವ ರಾಜೇಂದ್ರ, ಮೈದುನ ಸುಶೀಲ್ಗೆ ಆಶ್ರಯ ಹಾಗೂ ಆರ್ಥಿಕ ಸಹಾಯ ಆರೋಪದಡಿ ಪ್ರೀತಮ್ನನ್ನು ಬಂಧಿಸಲಾಗಿದೆ.
ಕೊಲೆ ಆರೋಪಿಗಳು ಅಜೀತ ಪವಾರ ಬಣದ ಎನ್.ಸಿ.ಪಿ ಪಕ್ಷದ ಮುಖಂಡರಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ವೈಷ್ಣವಿ ಕೊಲೆ ಪ್ರಕರಣ ಸಂಚಲನ ಮೂಡಿಸಿದೆ.