
ಉಡುಪಿ: ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

j3tvkannada
ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಲ್ಲೂ ಮನವಿ ಮಾಡಿದ್ದಾರೆ. ಜಿಲ್ಲೆಯಾದ್ಯಂತ ಬಿಟ್ಟುಬಿಡದೆ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನ ಕೂಡ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಪ್ರವಾಸಿ ತಾಣಗಳಲ್ಲಿ, ನದಿ – ಸಮುದ್ರ ಪಾತ್ರಗಳಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಬೇಕು ಎಂದು ಸಚಿವರು ತಿಳಿಸಿದ್ದಾರೆ.
ಸಮುದ್ರ ಹಾಗೂ ನದಿ ದಡದಲ್ಲಿ ವಾಸಿಸುತ್ತಿರುವ ಜನರನ್ನು ಅಗತ್ಯ ಬಿದ್ದರೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳಾಂತರಿಸಬೇಕು. ಜನರ ಅನುಕೂಲಕ್ಕಾಗಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು, ಏಳು ತಾಲೂಕು ಜನರ ಅನುಕೂಲಕ್ಕಾಗಿ 24 ಗಂಟೆಯೂ ಸಹಾಯವಾಣಿ ಕಾರ್ಯನಿರ್ವಹಿಸಬೇಕು ಎಂದು ಸಚಿವೆ ಹೆಬ್ಬಾಳಕರ್ ತಿಳಿಸಿದ್ದಾರೆ.
ಅಂಗನವಾಡಿಗಳಿಗೆ ರಜೆ ಘೋಷಣೆ:-
ಉಡುಪಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡಾ ಭಾರೀ ಮಳೆ ಹಿನ್ನೆಲೆ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.
ತಾಲೂಕುವಾರು ಮಳೆ ಪ್ರಮಾಣ:-
ಕಾರ್ಕಳ: 53.6 ಮಿ.ಮೀ. ಕುಂದಾಪುರ: 68.2 ಮಿ.ಮೀ. ಉಡುಪಿ: 80.9 ಮಿ. ಮೀ. ಬೈಂದೂರು: 83.9 ಮಿ.ಮೀ. ಬ್ರಹ್ಮಾವರ: 93.3 ಮಿ.ಮೀ. ಕಾಪು: 48.9 ಮಿ.ಮೀ. ಹೆಬ್ರಿ: 114 ಮಿ.ಮೀ ಮಳೆಯಾಗಿದೆ. ಬೈಂದೂರು ತಾಲೂಕಿನ ಶಿರೂರು ಗ್ರಾಮದ ಗಿರಿಜಾ ಅವರ ಮನೆಗೆ ಸಿಡಿಲು ಬಡಿದು ಮನೆಯಲ್ಲಿದ್ದ ಮಂಗಳಾ ಎಂಬವರು ಗಾಯಗೊಂಡಿದ್ದಾರೆ. ರೆಡ್ ಅಲರ್ಟ್ ಹಿನ್ನೆಲೆಯಲ್ಲಿಉಡುಪಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಮಳೆ ಪ್ರಮಾಣ ಹೆಚ್ಚಿದ್ದು, ವಿಪತ್ತು ನಿರ್ವಹಣೆಗಾಗಿ ತಾಲೂಕು ಮಟ್ಟದ ನಿಯಂತ್ರಣ ಕೊಠಡಿ / ಸಹಾಯವಾಣಿ ಆರಂಭಿಸಲಾಗಿದೆ.