
ದಾವಣಗೆರೆ: ಕಳೆದ ಲೋಕಸಭಾ ಚುನಾವಣೆ ವೇಳೆ ಹಣ ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ ಹರಿಹರ ನಗರಸಭೆ ವ್ಯವಸ್ಥಾಪಕಿಯನ್ನು ಅಮಾನತುಗೊಳಿಸಲಾಗಿದೆ.

j3tvkannada
ಹೆಚ್.ನಿರಂಜನಿ ಅಮಾನತಾದ ಅಧಿಕಾರಿಯಾಗಿದ್ದಾರೆ. ಇವರ ಮೇಲೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಹಣ ದುರುಪಯೋಗ ಮಾಡಿರುವ ಆರೋಪವಿದೆ. ಅಲ್ಲದೇ ಕರ್ತವ್ಯಕ್ಕೆ ಸರಿಯಾಗಿ ಹಾಜರಾಗದೇ ಇರುವುದು, ಸಾರ್ವಜನಿಕರ ಕೆಲಸ ಮಾಡದಿರುವುದು ಹಾಗೂ ಇನ್ನಿತರ ಕರ್ತವ್ಯ ಲೋಪ ಹಿನ್ನೆಲೆ ಜಿಲ್ಲಾಧಿಕಾರಿ ಜಿ.ಎಂ ಗಂಗಾಧರ ಸ್ವಾಮಿಯವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಹೊನ್ನಾಳಿಯ ಪುರಸಭೆಯ ಪ್ರಭಾರಿ ಮುಖ್ಯಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ ಲೋಕಸಭಾ ಚುನಾವಣೆಯ ವೇಳೆ ಹಣ ದುರುಪಯೋಗವಾಗಿದೆ. ಹರಿಹರ ನಗರಸಭೆಯ ವ್ಯವಸ್ಥಾಪಕರಾಗಿ ವರ್ಗಾವಣೆಗೊಂಡ ಅವಧಿಯಲ್ಲಿಯೂ ಪ್ರಭಾರಿ ಕಂದಾಯ ಅಧಿಕಾರಿಯಾಗಿ ಬಿ ಖಾತಾ ವಿತರಣೆಯಲ್ಲಿ, ದಾಖಲೆ ಕೊಠಡಿ ನಿರ್ವಹಣೆಯಲ್ಲಿನ ಕರ್ತವ್ಯ ಲೋಪದ ಮೇಲೆ ಅಮಾನತುಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.