
ಬೆಂಗಳೂರು: ಮಾದಕವಸ್ತುಗಳ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಈಶಾನ್ಯ ವಿಭಾಗದ ಪೊಲೀಸರು ಬಟ್ಟೆ ವ್ಯಾಪಾರದ ನೆಪದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ವಿದೇಶಿ ಡ್ರಗ್ ಪೆಡ್ಲರ್ನನ್ನು ಬಂಧಿಸಿ 3 ಕೋಟಿ ಮೌಲ್ಯದ ಎಂ.ಡಿ.ಎಂ.ಎ ಕ್ರಿಸ್ಟಲ್ ಜಪ್ತಿ ಮಾಡಿದ್ದಾರೆ.

j3tvkannada
ನೈಜೀರಿಯಾ ಪ್ರಜೆ ಪೇಪೆ ಮೋರೆಪೇಯಿ ಬಂಧಿತ ಡ್ರಗ್ ಪೆಡ್ಲರ್ ಆಗಿದ್ದಾನೆ,ವ್ಯಾಪಾರಿ ವೀಸಾದಲ್ಲಿ ನಗರಕ್ಕೆ ಬಂದು ಹೆಬ್ಬಾಳದ ಟಾಟಾನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸಿಸುತ್ತಿದ್ದ ಆರೋಪಿಯು ಸುಲಭವಾಗಿ ಹಣಗಳಿಸಲು ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕಳೆದ ಮೇ.20 ರಂದು ಅಮೃತಹಳ್ಳಿಯ ದಾಸರಹಳ್ಳಿಯಲ್ಲಿನ ನಾರ್ಥ್ಹಿಲ್ಸ್ ಶಾಲೆ ಹಿಂಭಾಗದ ಖಾಲಿ ಜಾಗದಲ್ಲಿ ಎಂ.ಡಿ.ಎಂ.ಎ ಕ್ರಿಸ್ಟಲ್ಗಳನ್ನು ಯುವಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದನು. ಈ ಸಂಬಂಧ ಖಚಿತವಾದ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡು ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತನಿಂದ 3ಕೋಟಿ ಮೌಲ್ಯದ 3 ಕೆಜಿ ಎಂ.ಡಿ.ಎಂ.ಎ ಕ್ರಿಸ್ಟಲನ್ನು ವಶಪಡಿಸಿಕೊಂಡು ನಡೆಸಿದ ಸುದೀರ್ಘ ವಿಚಾರಣೆಯಲ್ಲಿ ಆರೋಪಿಯು 2023ನೇ ಸಾಲಿನಲ್ಲಿ ಕೆಲಸ ಹುಡುಕಿಕೊಂಡು ನಗರಕ್ಕೆ ಬಂದು ಎಂ.ಡಿ.ಎಂ.ಎ ಕಮ್ಮನಹಳ್ಳಿಯ ಮತ್ತೋರ್ವ ವಿದೇಶಿ ವ್ಯಕ್ತಿಯಿಂದ ಕಡಿಮೆ ಬೆಲೆಗೆ ಕ್ರಿಸ್ಟಲನ್ನು ಖರೀದಿಸಿ, ಬಟ್ಟೆ ವ್ಯಾಪಾರ ಮಾಡುವ ನೆಪದಲ್ಲಿ ನಗರದ ಸಾರ್ವಜನಿಕರಿಗೆ ಹಾಗೂ ಕಾಲೇಜ್ ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದನ್ನು ಬಾಯ್ಬಿಟ್ಟಿದ್ದಾನೆ.
ಈಶಾನ್ಯ ವಿಭಾಗದ ಡಿ.ಸಿ.ಪಿ ಸಜಿತ್ ಮಾರ್ಗದರ್ಶನದಲ್ಲಿ ಅಮೃತಹಳ್ಳಿ ಪೊಲೀಸ್ ಇನ್ಸ್ ಪೆಕ್ಟರ್ ಅಂಬರೀಶ್ ಮತ್ತವರ ಸಿಬ್ಬಂದಿಗಳು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಕಮೀಷನರ್ ತಿಳಿಸಿದರು.