ಉಡುಪಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 2 ದಿನ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆಯು, ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಮೇ 29 ರಂದು ರೆಡ್ ಅಲರ್ಟ್ ಹಾಗೂ ಉಡುಪಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿ ಜಿಲ್ಲೆಗೆ ಯೆಲ್ಲೊಅಲರ್ಟ್ ನೀಡಲಾಗಿದೆ.

j3tvkannada.in
ನಾಳೆಯೂ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಮಳೆ ತೀವ್ರತೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಅಂಗನವಾಡಿಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ಹವಾಮಾನ ತಜ್ಞರ ಹೇಳಿಕೆ
ಇಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದರೆ, ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ. ಪ್ರಮುಖವಾಗಿ ಮಂಕಿಯಲ್ಲಿ 14 ಸೆಂ.ಮೀ, ಬಾಗಮಂಡಲ-ಆಗುಂಬೆಯಲ್ಲಿ 12 ಸೆಂ.ಮೀ ಮಳೆಯಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ತೀವ್ರವಾಗಿದೆ. ಇದರ ಪ್ರಭಾವದಿಂದ ಮೇ 29, ಹಾಗೂ ಮೇ 30 ರಂದು ಕರ್ನಾಟಕದಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಮೇ 31 ರಿಂದ ಜೂನ್ 2 ರವರೆಗೆ ಕೆಲವು ಕಡೆ ಮಾತ್ರ ಮಳೆಯಾಗಲಿದೆ. ಮೇ 31 ರಿಂದ ಮಳೆ ಕಡಿಮೆಯಾಗಲಿದೆ ಎಂದು ಹವಾಮಾನ ವಿಜ್ಞಾನಿ ಸಿ.ಎಸ್ ಪಾಟೀಲ್ ಹೇಳಿದ್ದಾರೆ.
ಎಲ್ಲೆಲ್ಲಿ ಆರೆಂಜ್ ಅಲರ್ಟ್ ?
ಉತ್ತರ ಕನ್ನಡ , ಉಡುಪಿ, ದಕ್ಷಿಣ ಕನ್ನಡ , ಶಿವಮೊಗ್ಗ, ಕೊಡಗು, ಚಿಕ್ಕಮಂಗಳೂರಲ್ಲಿ ಅತಿಭಾರೀ ಮಳೆಯ ಕಾರಣ ಮೇ 29, 30 ರಂದು ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಕೊಡಲಾಗಿದೆ.
ಯೆಲ್ಲೋ ಅಲರ್ಟ್
ಹಾಸನ, ಮೈಸೂರು, ಚಾಮರಾಜನಗರ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಮೇ 29 ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ. ಬೆಂಗಳೂರಲ್ಲಿ ಇಂದು ಮತ್ತು ನಾಳೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಎಲ್ಲಿ, ಎಷ್ಟು ಮಳೆ?
ಊರು- ಆಗುಂಬೆ 15 ಸೆಂ.ಮೀ
ಸೋಮವಾರಪೇಟೆ, ಸಿದ್ದಾಪುರ(ಉಡುಪಿ ಜಿಲ್ಲೆ) 13 ಸೆಂ.ಮೀ
ಶೃಂಗೇರಿ 11 ಸೆಂ.ಮೀ
ಭಾಗಮಂಡಲ 10 ಸೆಂ.ಮೀ
ಕುಂದಾಪುರ, ಮಂಕಿ 09 ಸೆಂ.ಮೀ
ಮೂಡಬಿದ್ರೆ, ಕೊಪ್ಪ, ನಾಪೋಕ್ಲು 07 ಸೆಂ.ಮೀ
ಉಪ್ಪಿನಂಗಡಿ, ಧರ್ಮಸ್ಥಳ, ಸುಳ್ಯ 06 ಸೆಂ.ಮೀ ಮಳೆಯಾಗಿದೆ.