
ಬೆಳಗಾವಿ: ಹೆಂಡತಿ ಕಾಟಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಗಂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ನಗರದ ಅನಗೋಳದ ದುರ್ಗಾ ಕಾಲೋನಿಯಲ್ಲಿ ನಡೆದಿದೆ.

j3tvkannada
ಸುನೀಲ್ ಮೂಲಿಮನಿ (33) ಆತ್ಮಹತ್ಯೆ ಮಾಡಿಕೊಂಡ ಪತಿ. ತನ್ನದೇ ಕಂಪ್ಯೂಟರ್ ಶಾಪ್ನಲ್ಲಿ ವೈಯರ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 4 ವರ್ಷಗಳ ಹಿಂದೆ ಪೂಜಾ ಎಂಬಾಕೆಯನ್ನು ಸುನೀಲ್ ಮದುವೆಯಾಗಿದ್ದರು. ಈಗ ದಂಪತಿಗೆ ಮೂರು ವರ್ಷದ ಮಗು ಇದೆ.
ಆತ್ಮಹತ್ಯೆಗೂ ಮುನ್ನ ʻಮೈ ವೈಫ್ ಈಸ್ ರೀಜನ್ ಫಾರ್ ಮೈ ಡೆತ್ ʼ ಅಂತ ಡೆತ್ನೋಟ್ ಬರೆದಿಟ್ಟು ಸುನೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸದ್ಯ ಮರಣೋತ್ತರ ಪರೀಕ್ಷೆಗಾಗಿ ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹ ಶಿಫ್ಟ್ ಮಾಡಲಾಗಿದ್ದು, ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ 108 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.