
ಬೆಂಗಳೂರು: ನಗರದ ಹೊರವಲಯ ಟಿ.ದಾಸರಹಳ್ಳಿಯಲ್ಲಿರುವ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡು; ಕ್ಷಣಾರ್ಧದಲ್ಲೇ ಹೊತ್ತಿ ಉರಿದಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.

j3tvkannada
ಅಗ್ನಿ ಅವಘಡದಲ್ಲಿ 4 ಎಲೆಕ್ಟ್ರಿಕ್ ಬೈಕ್ಗಳು ಬೆಂಕಿಗಾಹುತಿಯಾಗಿದೆ, ಇನ್ನೂ ಮನೀಷ್ ಎಂಬುವವರಿಗೆ ಸೇರಿದ್ದ ಎಲೆಕ್ಟ್ರಿಕ್ ಬೈಕ್ ಶೋರೂಂ ಆಗಿದ್ದು ರಾತ್ರಿ ಶೋರೂಂ ಕ್ಲೋಸ್ ಮಾಡಿ ಮನೆಗೆ ತೆರಳಿದ ವೇಳೆ ಈ ಅವಘಡ ಸಂಭವಿಸಿದೆ.
ಶೋರೂಂನಲ್ಲಿದ್ದ ಎಲೆಕ್ಟ್ರಿಕ್ ಬೈಕ್ಗಳ ಬ್ಯಾಟರಿ ಬ್ಲಾಸ್ಟ್ ಆಗಿ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಪೀಣ್ಯಾ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.
ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.