
ರಾಮನಗರ: ಡಿ.ಸಿ.ಎಂ ಡಿ.ಕೆ ಶಿವಕುಮಾರ್ ಅವರು ಪಟ್ಟು ಬಿಡದೇ ರಾಮನಗರ ಹೆಸರು ಬದಲಾಯಿಸುವಲ್ಲಿ ಸಫಲರಾಗಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಡಿ.ಸಿ.ಎಂ ಡಿ.ಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ ಎನ್ನುವ ಮಾಹಿತಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

j3tvkannada
ಡಿ.ಸಿ.ಎಂ ಡಿ.ಕೆ.ಶಿವಕುಮಾರ್ ರೇಷ್ಮೆನಗರಿ ಜಿಲ್ಲೆಯ ಹೆಸರು ಬದಲಾವಣೆ ಮಾಡಿಸುವಲ್ಲಿ ಗೆದ್ದರು. 2024ರ ಜು.25 ರಂದು ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಸಂಬಂಧ ರಾಜ್ಯ ಸಂಪುಟ ಸಭೆ ನಿರ್ಧಾರ ಕೈಗೊಂಡು ಕೇಂದ್ರ ಸರ್ಕಾರಕ್ಕೆ ನಿರ್ಣಯದ ಪ್ರತಿಯನ್ನು ಕಳುಹಿಸಿದ್ದಾರೆ. ಆದರೆ ಕೇಂದ್ರ ಸರ್ಕಾರ ಹೆಸರು ಬದಲಾವಣೆಯನ್ನು ತಿರಸ್ಕರಿಸಿತ್ತು.