
ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದ್ದು, ಜೀವನದಿ ಹೇಮಾವತಿ ಜಲಾಶಯದ ಒಳಹರಿವಿನಲ್ಲಿ ಏರಿಕೆಯಾಗಿದೆ.

j3tvkannada
ಸಕಲೇಶಪುರ, ಆಲೂರು ಭಾಗದಲ್ಲಿ ಮಳೆಯಾಗುತ್ತಿದ್ದು, ಬಹುತೇಕ ಕಡೆ ಮೋಡ ಕವಿದ ವಾತಾವರಣವಿದೆ. ಹಾಸನ, ಬೇಲೂರು, ಅರಕಲಗೂಡು ತಾಲೂಕುಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಮಳೆ ಹಿನ್ನೆಲೆ ಹಾಸನ ತಾಲೂಕಿನ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 7,992 ಕ್ಯೂಸೆಕ್ ಒಳಹರಿವಿದೆ.
37.103 ಟಿ.ಎಂ.ಸಿ ನೀರು ಸಂಗ್ರಹ ಸಾಮರ್ಥ್ಯದ ಹೇಮಾವತಿ ಜಲಾಶಯದಲ್ಲಿ ಸದ್ಯ 23.661 ಟಿ.ಎಂ.ಸಿ ನೀರು ಸಂಗ್ರಹವಾಗಿದೆ. ನದಿಯಿಂದ 3,875 ಕ್ಯೂಸೆಕ್ ಹೊರಹರಿವಿದೆ. ಹೇಮಾವತಿ ಜಲಾಶಯದ ಗರಿಷ್ಠ ಮಟ್ಟ 2922.00 ಅಡಿಗಳಾಗಿದ್ದು, ಇಂದಿನ ನೀರಿನ ಮಟ್ಟ 2905.85 ಅಡಿಯಿದೆ.