
ಮಂಡ್ಯ: ಇತ್ತೀಚೆಗೆ ಸರ್ಕಾರಿ ಶಾಲೆಗಳು ಅಂದ್ರೆ ಗ್ರಾಮೀಣ ಭಾಗದ ಜನರು ಕೂಡ ಮೂಗು ಮುರಿಯುತ್ತಿದ್ದಾರೆ. ಆದ್ರೆ ಇಲ್ಲೊಂದು ಗ್ರಾಮದಲ್ಲಿ ಇಂತವರಿಗೆ ಅರಿವು ಮೂಡಿಸೋಕೆ ಸರಸ್ವತಿಯನ್ನು ಎತ್ತಿನ ಗಾಡಿಯಲ್ಲಿ ಇರಿಸಿ ಊರ ತುಂಬಾ ಮೆರವಣಿಗೆ ಮಾಡಿದ್ದಾರೆ.

j3tvkannada
ರಾಜ್ಯದಲ್ಲಿ 2025-26ನೇ ಸಾಲಿನ ತರಗತಿಗಳು ಆರಂಭವಾಗಿವೆ. ಆದ್ರೆ ಖಾಸಗಿ ಶಿಕ್ಷಣ ಸಂಸ್ಥೆಗಳ ಅಬ್ಬರಕ್ಕೆ ಸರ್ಕಾರಿ ಶಾಲೆಗಳು ಮುಚ್ಚಿ ಹೋಗ್ತಿವೆ. ಇದರ ನಡುವೆ ಸರ್ಕಾರಿ ಶಾಲೆಗಳ ಉಳಿವಿಗಾಗಿ ಒಂದಷ್ಟು ಹೋರಾಟಗಳು ನಡೆದರೆ ಮತ್ತೊಂದಷ್ಟು ಜನರು ಸರ್ಕಾರಿ ಶಾಲೆಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡ್ತಿದ್ದಾರೆ. ಇದರ ಭಾಗವಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕೆಂಪಯ್ಯನದೊಡ್ಡಿ ಗ್ರಾಮದಲ್ಲಿ ಮಕ್ಕಳು ಪೂರ್ಣ ಕುಂಭದೊಂದಿಗೆ ಗ್ರಾಮದಲ್ಲಿ ವಿದ್ಯಾ ಸರಸ್ವತಿಯನ್ನು ಹೊತ್ತುಕೊಂಡು ಮೆರವಣಿಗೆ ನಡೆಸಿ ಎಲ್ಲರ ಗಮನ ಸೆಳೆದಿದ್ದಾರೆ.