
ಧಾರವಾಡ: ದಿನೇ ದಿನೇ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ ಕೊರೊನಾ ಕಾಣಿಸಿಕೊಂಡಿದೆ.

j3tvkannada
ಹುಬ್ಬಳ್ಳಿಯ ಬೈರಿದೇವರಕೊಪ್ಪ ಗ್ರಾಮದ 11 ತಿಂಗಳ ಮಗುವಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಗುವಿಗೆ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಕೊಡಿಸಲು ಹೋದಾಗ ಕೋವಿಡ್ ಇರೋದು ಪತ್ತೆಯಾಗಿದೆ. ಸದ್ಯ ಮಗುವಿನ ಆರೋಗ್ಯ ಸ್ಥಿರವಾಗಿದೆ ಅಂತ ಧಾರವಾಡ ಜಿಲ್ಲಾಡಳಿತ ಮಾಹಿತಿ ನೀಡಿದೆ.
ಕೊರೊನಾ ಸೋಂಕು ಉಲ್ಬಣದ ಕುರಿತು ಮಾತನಾಡಿರುವ ಸಚಿವ ದಿನೇಶ್ ಗುಂಡೂರಾವ್, ಈ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನಿಲ್ಲ ಹಿಂದೆ ಏನು ಸೂಚನೆ ಕೊಟ್ಟಿದ್ದೆವೊ ಅಷ್ಟೆ. ಸದ್ಯಕ್ಕೆ ವಿಶೇಷವಾಗಿ ಹೇಳುಂತದ್ದು ಏನೂ ಇಲ್ಲ. ಕೇಂದ್ರ ಸರ್ಕಾರ ಸಹ ಇದು ಅಪಾಯಕಾರಿ ಏನಲ್ಲ ಅಂತ ಮೆಸೇಜ್ ಕೊಟ್ಟಿದೆ. ಸಣ್ಣ ಪ್ರಮಾಣದಲ್ಲಿ ತೊಂದರೆ ಆಗಬಹುದೇ ಹೊರತು ಅಪಾಯಕಾರಿ ಅಲ್ಲ ಎಂದು ವಿಶ್ಲೇಷಣೆ ಮಾಡಿದ್ದಾರೆ. ಹಾಗಾಗಿ ಜನ ಆತಂಕಪಡುವ ಅಗತ್ಯವಿಲ್ಲ. ರೋಗ ನಿರೋಧಕ ಶಕ್ತಿ ಕಡಿಮೆ ಇದ್ದವರು ಎಚ್ಚರಿಕೆಯಿಂದ ಇರಬೇಕು. ಬೇರೆ ಬೇರೆ ಕಾಯಿಲೆ ಇದ್ದಾಗ ಇದು ಸಮಸ್ಯೆ ಆಗಬಹುದು, ಸ್ವಲ್ಪ ಎಚ್ಚರಿಕೆಯಿಂದ ಇರಬೇಕು ಅಷ್ಟೆ ಅಂತ ಸಲಹೆ ನೀಡಿದ್ದಾರೆ.