
ಬೆಳಗಾವಿ: ಟ್ರ್ಯಾಕ್ಟರ್ ಡ್ರೈವರ್ ಆಗಿರುವ ಬಸಪ್ಪ ಅಡಿವೆಪ್ಪ ಹಳ್ಳೂರ ಎಂಬಾತನಿಗೆ ಈಗಾಗಲೇ ಮದುವೆಯಾಗಿ ಇಬ್ಬರು ಮಕ್ಕಳು ಇದ್ದಾರೆ. ಆದರೂ ಸಹ ಬಸಪ್ಪ ಅಪ್ರಾಪ್ತೆ ಬಾಲಕಿಯನ್ನು ಪುಸಲಾಯಿಸಿ ಆಕೆಯೊಂದಿಗೆ ನಿರಂತರವಾಗಿ ದೈಹಿಕ ಸಂಪರ್ಕ ಬೆಳಸಿದ್ದಾನೆ. ಪರಿಣಾಮ ಬಾಲಕಿ ಇದೀಗ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ.

ಎರಡು ಮಕ್ಕಳಿರುವ ವ್ಯಕ್ತಿಯೋರ್ವ ಅಪ್ರಾಪ್ತೆಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಆಗುವಂತೆ ಮಾಡಿರುವ ಘಟನೆ ಬೆಳಗಾವಿಯ ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಡೀ ಮಾನವ ಕುಲವೇ ತಲೆ ತಗ್ಗಿಸುವ ಪೈಶಾಚಿಕ ಕೃತ್ಯವಾಗಿದೆ ಬಾಲಕಿ ಗರ್ಬಿಣಿ ಎಂಬ ವಿಚಾರ ಗೊತ್ತಾಗುತ್ತಿದ್ದಂತೆ ಪೋಷಕರು ದೂರು ನೀಡಿದ್ದಾರೆ.
ಆರೋಗ್ಯ ಮತ್ತು ದೇಹದಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ ಕುಟುಂಬಸ್ಯರು ಕೂಡಲೇ ಬಾಲಕಿಯನ್ನು ವೈದ್ಯರ ಬಳಿ ಕರೆದುಕೊಂಡು ಹೋಗಿ ಪರೀಕ್ಷೆ ಮಾಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿ ಗರ್ಭಿಣಿಯಾಗಿರುವ ವಿಚಾರ ಗೊತ್ತಾಗುತ್ತಿದ್ದಂತೆಯೇ ಆಕೆಯ ಪೋಷಕರು ಆಘಾತಕ್ಕೊಳಗಾಗಿದ್ದಾರೆ. ಬಳಿಕ ಬಾಲಕಿಯ ಪೋಷಕರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಪೊಲೀಸರು ಆರೋಪಿ ಬಸಪ್ಪ ಅಡಿವೆಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.