
ಉಡುಪಿ: 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಉಡುಪಿ ನಗರಸಭೆಯ ವಳಕಾಡು ವಾರ್ಡಿನ ಸರ್ಕಾರಿ ಸಂಯುಕ್ತ ಪ್ರೌಢಶಾಲೆಗೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಿ, ಆತ್ಮೀಯವಾಗಿ ಸ್ವಾಗತಿಸಿದರು.

j3tvkannada
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ದೇಶದ ಭವಿಷ್ಯ ರೂಪಿಸಲಿರುವ ಯುವ ಪೀಳಿಗೆಯ ವಿದ್ಯಾರ್ಥಿಗಳಿಗೆ ಗುಣ ಮಟ್ಟದ ಶಿಕ್ಷಣ ನೀಡಿ ದೇಶಕ್ಕೆ ಆಸ್ತಿಯನ್ನಾಗಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ ಶಿಕ್ಷಣ ಸಂಸ್ಥೆಗಳು ನಿರಂತರ ಸಾಧನೆ ಮಾಡುತ್ತಿದ್ದು, ಎಲ್ಲಾ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದರು.
ಶಾಸಕರ ಪುಷ್ಪಾನಂದ ಫೌಂಡೇಶನ್ ವತಿಯಿಂದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಒದಗಿಸಿದ ಸಿಹಿ ತಿಂಡಿಯನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಉಪಾಧ್ಯಕ್ಷರಾದ ರಜನಿ ಹೆಬ್ಬಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಮ್ಮ, ಶಾಲಾಭಿವೃದ್ಧಿ ಸಮಿತಿ ಪ್ರಮುಖರಾದ ನಾಗಭೂಷಣ ಶೇಟ್, ಡಾ. ಎಂ. ಆರ್. ಹೆಗ್ಡೆ, ಡಾ. ವಿರೂಪಾಕ್ಷ, ಚಂದ್ರ ಶೇಖರ್, ಗಣೇಶ್ ಹೆಗ್ಡೆ, ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಪೂರ್ಣಿಮ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಕುಸುಮ ಹಾಗೂ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.