
ದಕ್ಷಿಣ ಕನ್ನಡ(ಮಂಗಳೂರು): ಜಿಲ್ಲೆಯಲ್ಲಿ ಹಿಂದೂ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಎಫ್.ಐ.ಆರ್ ದಾಖಲಾದ ಬೆನ್ನಲ್ಲೇ ಪುತ್ತಿಲ ಪರಿವಾರ ಮುಖ್ಯಸ್ಥ, ಬಿ.ಜೆ.ಪಿ ಮುಖಂಡ ಅರುಣ್ ಕುಮಾರ್ ಪುತ್ತಿಲಗೆ ಗಡಿಪಾರು ನೋಟಿಸ್ ನೀಡಲಾಗಿದೆ.

j3tvkannada
ಕರ್ನಾಟಕ ಪೊಲೀಸ್ ಅಧಿನಿಯಮ, 1963 ಕಲಂ 58ರಡಿ ನೋಟೀಸ್ ಜಾರಿ ಮಾಡಲಾಗಿದೆ. ಅಲ್ಲದೇ ಜೂನ್ 6ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ನೋಟಿಸ್ ಜಾರಿ ಮಾಡಿದ್ದು, ಸ್ವತಃ ಅಥವಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಲು ಸೂಚನೆ ನೀಡಲಾಗಿದೆ.
ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ಜಾರಿ ಮಾಡಿದ್ದಾರೆ. ಸದ್ರಿ ವಿಚಾರಣೆಗೆ ತಪ್ಪದೇ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೀಡಿರುವ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.