
ಬೀದರ್: ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಜನಿಸಿದ ಹೆಣ್ಣು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ 18 ವರ್ಷದ ಹಿಂದೆ ರಾಜ್ಯದಲ್ಲಿ ಆರಂಭಗೊಂಡಿದ್ದ ಭಾಗ್ಯಲಕ್ಷ್ಮೀ ಯೋಜನೆಯ ತಲಾ ಒಂದು ಲಕ್ಷ ರೂ. ಲಾಭವನ್ನು ಇದೇ ಪ್ರಥಮ ಸಲ ಗಡಿ ಜಿಲ್ಲೆಯ 7,567 ಬಾಲಕಿಯರು ಪಡೆದಿದ್ದಾರೆ. ಜಿಲ್ಲೆಯಲ್ಲಿ ಭಾಗ್ಯಲಕ್ಷ್ಮಿ ಯೋಜನೆಯಡಿ 2006-07ನೇ ಸಾಲಿನಲ್ಲಿ 7,567 ಬಾಂಡ್ಗಳನ್ನು ಸ್ವೀಕರಿಸಲಾಗಿತ್ತು. ಅವುಗಳನ್ನು ನೋಂದಾಯಿಸಿ 18 ವರ್ಷ ಪೂರ್ಣಗೊಂಡ ಫಲಾನುಭವಿಗಳ ಬಾಲಕಿಯರು 2024 ರಲ್ಲಿ ಈ ಯೋಜನೆಯ ಮ್ಯಾಚ್ಯೂರಿಟಿ ಬೆನಿಫಿ ಷಿಯರ್ಗೆ ಅರ್ಹರಾಗಿದ್ದು, ಈ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ.

j3tvkannada
2023-24 ರಲ್ಲಿ ಹೆಣ್ಣು ಮಕ್ಕಳ ಬಾಂಡ್ಗೆ 18 ವರ್ಷ ತುಂಬಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಫಲಾನುಭವಿಗಳಿಗೆ ಹಣವನ್ನು ಡಿ.ಬಿ.ಟಿ ಮೂಲಕ ಕಳುಹಿಸುತ್ತಿದ್ದು, ಈಗಾಗಲೇ ಬಹುತೇಕ ಮಂದಿಗೆ ಹಣ ರವಾನೆಯಾಗಿದೆ. ಉಳಿದವರಿಗೂ ಹಂತ-ಹಂತವಾಗಿ ಹಣ ಸಿಗಲಿದೆ ಎನ್ನುತ್ತಾರೆ ಅಧಿಕಾರಿಗಳು. ಈ ಯೋಜನೆಯು ಹೆಣ್ಣು ಮಕ್ಕಳ ಭವಿಷ್ಯ ಸುರಕ್ಷಿತಗೊಳಿಸುವ ಮತ್ತು ಅವರನ್ನು ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಗುರಿಯನ್ನು ಹೊಂದಿದೆ. ರಾಜ್ಯ ಸರಕಾರ ಈ ಯೋಜನೆಯಡಿ ಬಿ.ಪಿ.ಎಲ್ ಕುಟುಂಬದ ಹೆಣ್ಣು ಮಕ್ಕಳ ಜನ್ಮದಿನಾಂಕವನ್ನು ಒಂದು ವರ್ಷದೊಳಗೆ ನೋಂದಾಯಿಸಬೇಕು. ಆಗ ಅವರಿಗೆ ಒಂದು ನಿರ್ದಿಷ್ಟ ಮೊತ್ತದ ಬಾಂಡ್ ನೀಡಲಾಗುತ್ತಿತ್ತು. ಆದರೆ ಸದ್ಯ ಈ ಯೋಜನೆಯನ್ನು ಸುಕನ್ಯಾ ಸಮೃದ್ಧಿ ಯೋಜನೆಯೊಂದಿಗೆ ವಿಲೀನಗೊಳಿಸಲಾಗಿದೆ.

j3tvkannada
ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಹೆಣ್ಣು ಮಗುವಿನ ಜನನವನ್ನು ಉತ್ತೇಜಿಸುವ ನಿಟ್ಟಿನಲ್ಲಿ 2006-07 ರಲ್ಲಿ ಅಂದಿನ ಸಿ.ಎಂ ಬಿ.ಎಸ್.ಯಡಿಯೂರಪ್ಪ ಅವರು ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದರು. ಈ ಯೋಜನೆಯಡಿ ನೋಂದಣಿ ಮಾಡಿಸಿದ್ದ ಹೆಣ್ಣು ಮಗುವಿನ ಬಾಂಡ್ಗೆ 18 ವರ್ಷ ತುಂಬಿದ್ದು (ಮ್ಯಾಚ್ಯುರಿಟಿ), ಫಲಾನುಭವಿಗಳಿಗೆ ಹಣ ಅವರ ಖಾತೆಗೆ ಜಮೆ ಮಾಡಲಾಗಿದೆ ಎಂದು ವಿಕಕ್ಕೆ ಮಾಹಿತಿ ನೀಡಿದ್ದಾರೆ. ನೋಂದಣಿ ಮಾಡಿಸಿಕೊಂಡಿದ್ದ ಫಲಾನುಭವಿಗಳಿಗೆ 18 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಎಲ್.ಐ.ಸಿ.ಯಿಂದ ಪರಿಪಕ್ವ ಮೊತ್ತ ಮಂಜೂರಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಈಗಾಗಲೇ ಎಲ್ಲಾ ಫಲಾನುಭವಿಗಳಿಂದ ಅಗತ್ಯ ದಾಖಲೆಗಳನ್ನು ಪಡೆದು ಹಣ ರವಾನಿಸುವ ವ್ಯವಸ್ಥೆ ಮಾಡಿದೆ.
ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಂಡಿದ್ದಾರೆ. ಹೆಣ್ಣು ಭ್ರೂಣ ಹತ್ಯೆ ತಡೆಯಲು, ಬಾಲ್ಯ ವಿವಾಹ ಪದ್ಧತಿ ನಿಯಂತ್ರಿಸಲು, ಹೆಣ್ಣು ಮಗುವಿನ ಶಿಕ್ಷಣ, ಲಿಂಗಾನುಪಾತ ಉತ್ತಮ ಪಡಿಸಲು, ಆರೋಗ್ಯಮಟ್ಟ ಉತ್ತಮಪಡಿಸಿ ಹೆಣ್ಣು ಮಕ್ಕಳನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಭಾಗ್ಯಲಕ್ಷೀ ಯೋಜನೆ ಜಾರಿಗೆ ತರಲಾಗಿತ್ತು. ಅದಕ್ಕಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಜನಸಿದ ಎರಡು ಹೆಣ್ಣುಮಗುವಿಗೆ ಸರಕಾರವು ನಿಶ್ಚಿತ ಠೇವಣಿ ಹೂಡಿ ಈ ಮಗುವಿಗೆ 18 ವರ್ಷ ಪೂರ್ಣಗೊಂಡ ನಂತರ ಬಡ್ಡಿ ಸಹಿತ ಪರಿಪಕ್ವ ಹಣ ನೀಡುವ ಉದ್ದೇಶದಿಂದ ಈ ಯೋಜನೆ ಆರಂಭಿಸಿತ್ತು.