
ದಕ್ಷಿಣ ಕನ್ನಡ(ಮಂಗಳೂರು): ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಬಂಧನ ಸಹಿತ ಯಾವುದೇ ಒತ್ತಡದ ಕ್ರಮ ಕೈಗೊಳ್ಳದಂತೆ ನ್ಯಾ.ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ನ ಏಕ ಸದಸ್ಯ ಪೀಠ ಆದೇಶ ಹೊರಡಿಸಿ, ಜೂನ್ 10ಕ್ಕೆ ವಿಚಾರಣೆ ಮುಂದೂಡಿದ್ದಾರೆ. ಕಲ್ಲಡ್ಕ ಪ್ರಭಾಕರ ಭಟ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಾಡಿದರು.

j3tvkannada
ಪ್ರಕರಣ ರದ್ದು ಕೋರಿ ಕಲ್ಲಡ್ಕ ಪ್ರಭಾಕರ ಭಟ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದರು. ಭಾಷಣ ಮಾಡಿದ ಹಲವು ದಿನಗಳ ಬಳಿಕ ದುರುದ್ದೇಶದಿಂದ ಎಫ್.ಐ.ಆರ್ ದಾಖಲಿಸಲಾಗಿದೆ ಎಂದು ಕಲ್ಲಡ್ಕ ಪ್ರಭಾಕರ ಭಟ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾ.ಎಸ್.ಆರ್.ಕೃಷ್ಣಕುಮಾರ್ ರವರು ಪೊಲೀಸರ ವಿಚಾರಣೆಗೆ ಅರ್ಜಿದಾರರು ಸಹಕರಿಸಬೇಕು. ಹೈಕೋರ್ಟ್ ಅನುಮತಿ ಇಲ್ಲದೇ ದೋಷಾರೋಪಪಟ್ಟಿ ಸಲ್ಲಿಸುವಂತಿಲ್ಲ. ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಮಧ್ಯಂತರ ಆದೇಶ ನೀಡಿದೆ.
ಏನಿದು ಪ್ರಕರಣ:-
ಮೇ 12ರಂದು ಬಂಟ್ವಾಳದ ಕಾವಳಪಡೂರು ಗ್ರಾಮದ ಮದುವೆ ಪ್ಯಾಲೇಸ್ ಹಾಲ್ನಲ್ಲಿ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮ ನಡೆದಿತ್ತು. ಈ ವೇಳೆ ಸಮಾಜದ ಸ್ವಾಸ್ಥ್ಯ ಕೆಡುವುದು ಮತ್ತು ಗುಂಪುಗಳ ನಡುವೆ ದ್ವೇಷ ಬಿತ್ತುವಂತೆ ಕಲ್ಲಡ್ಕ ಪ್ರಭಾಕರ ಭಟ್ ಪ್ರಚೋದನಕಾರಿ ಹೇಳಿಕೆ ನೀಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿ.ಎನ್.ಎಸ್ 353(2)ರ ಪ್ರಕರಣದಡಿ ಎಫ್.ಐ.ಆರ್ ದಾಖಲಾಗಿದೆ.
ಪ್ರಮೋದ್ ರೈ ನಂದುಗುರಿ, ತಿಲಕ್ ನಂದುಗುರಿ, ಮೋಹನ ಕೆರೆಕೋಡಿ, ಚಂದ್ರಶೇಖರ ನೂಜಿಬಾಳ್ತಿಲ, ಮಹೇಶ್ ಕುಟ್ರುಪ್ಪಾಡಿ, ಡೀಕಯ್ಯ ನೂಜಿಬಾಳ್ತಿಲ, ಸುಜಿತ್ ಕುಟ್ರುಪ್ಪಾಡಿ, ಶರತ್ ನಂದುಗುರಿ, ಶ್ರೇಯತ್, ನಂದುಗುರಿ, ಉಮೇಶ್ ನೂಜಿಬಾಳ್ತಿಲ, ರಾಧಾಕೃಷ್ಣ. ಕೆ, ಜಯಂತ್ ಮತ್ತು ಇತರೆ ಮೂವರ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.