
ಮೈಸೂರು: ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರ ಶಾಪ ತಟ್ಟೇ ತಟ್ಟುತ್ತೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

j3tvkannada
ಆರ್.ಸಿ.ಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಅವರು, 11 ಜನ ನಮ್ಮವರನ್ನ ಕಳೆದುಕೊಂಡಿದ್ದೇವೆ. ಪೂರ್ವ ತಯಾರಿ ಇಲ್ಲದೆ ಕಾರ್ಯಕ್ರಮ ಮಾಡಿದ್ದು ತಪ್ಪಾಗಿದೆ ಎಂದು ಟೀಕಿಸಿದರು.
ಪಕ್ಕದ ಆಂಧ್ರದಲ್ಲಿ ಕಾಲ್ತುಳಿದ ಆದಾಗ ನಟ ಅಲ್ಲು ಅರ್ಜನ್ ಮೇಲೆ ಕೇಸ್ ಹಾಕಿ ಜೈಲಿಗೆ ಕಳುಹಿಸಿದ್ದಾರೆ. ಪಕ್ಕದ ಸರ್ಕಾರ ಕಠಿಣ ಕ್ರಮ ತೆಗೆದುಕೊಂಡಿದೆ. ಆದರೆ, ಇಲ್ಲಿಯವರೆಗೆ ನಮ್ಮ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಕಿಡಿಕಾರಿದರು.
ವಿಧಾನಸೌಧಕ್ಕೆ ಯಾಕೆ ಆಟಗಾರನ್ನ ಕರೆದುಕೊಂಡು ಹೋದ್ರು. ಈ ಸಾವಿನ ಹೊಣೆಯನ್ನ ಸರ್ಕಾರವೇ ಹೊತ್ತುಕೊಳ್ಳಬೇಕು. ವಿಜಯೋತ್ಸವಕ್ಕೆ ಯಾವುದೇ ತಯಾರಿ ಮಾಡಿಕೊಂಡಿಲ್ಲ ಎಂದು ಬಿ.ಸಿ.ಸಿ.ಐ ಹೇಳಿದೆ. ವಿಶ್ವಕಪ್ ಗೆದ್ದಾಗ ಮಹಾರಾಷ್ಟ್ರದಲ್ಲಿ 20 ಲಕ್ಷ ಜನ ಸೇರಿದ್ದರು. ಸಿ.ಎಂ, ಡಿ.ಸಿ.ಎಂ ಹಾಗೂ ಗೃಹ ಸಚಿವರು ರಾಜೀನಾಮೆ ಈಗಾಗಲೇ ಕೊಡಬೇಕಿತ್ತು ಎಂದು ತಿಳಿಸಿದರು.
ಬಿ.ಜೆ.ಪಿ ಈ ಪ್ರಕರಣದಲ್ಲಿ ರಾಜಕಾರಣ ಮಾಡುತ್ತಿಲ್ಲ. ಕುಂಭಮೇಳದಲ್ಲಿ ಘಟನೆ ನಡೆದಾಗ ಕಾಂಗ್ರೆಸ್ ಯಾವ ರೀತಿ ಟೀಕೆ ಮಾಡಿತ್ತು. 60 ಕೋಟಿ ಜನ ಕುಂಭಮೇಳಕ್ಕೆ ಹೋಗಿದ್ದರು. ಪೊಲೀಸರ ಬಗ್ಗೆ ಯಾಕೆ ಟೀಕೆ ಮಾಡುತ್ತೀರಾ ಸರ್ಕಾರವೇ ಇದರ ಹೊಣೆ ಹೊರಬೇಕು ಎಂದು ಆಗ್ರಹಿಸಿದರು.