
ಹಾಸನ: ಕಲ್ಲು ಗಣಿಗಾರಿಕೆ ವೇಳೆ ದೊಡ್ಡ ಬಂಡೆ ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾಸನ ತಾಲೂಕಿನ ದೂಮಗೆರೆ ಗ್ರಾಮದ ಕಲ್ಲುಕ್ವಾರಿಯಲ್ಲಿ ಈ ಘಟನೆ ನಡೆದಿದ್ದು, ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ನಾಲ್ವರು ಕೂಲಿ ಕಾರ್ಮಿಕರು ಹಾಸನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

j3tvkannada
ಇನ್ನು ಮೃತ ಕಾರ್ಮಿಕನ್ನು ಚಾಮರಾಜನಗರ ಮೂಲದವರು ಎನ್ನಲಾಗಿದೆ. ಹಾಸನದ ಬಂಡೆ ದೇವರಾಜ್ ಗೆ ಸೇರಿದ ಕಲ್ಲು ಕ್ವಾರಿಯಲ್ಲಿ ಘಟನೆ ನಡೆದಿದೆ. ಶಾಂತಿ ಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹಾಸನದ ಬಂಡೆ ದೇವರಾಜ್ ಎಂಬುವವರಿಗೆ ಸೇರಿದ ಕ್ವಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ನಿನ್ನೆ ಬೆಳಗ್ಗೆ ಈ ದುರ್ಘಟನೆ ಸಂಭವಿಸಿದ್ದರೂ ವಿಷಯ ಮುಚ್ಚಿಟ್ಟಿದರು ಎಂಬ ಆರೋಪ ಕೇಳಿಬಂದಿದೆ. ಬೆಳಗ್ಗೆ ನಡೆದ ಘಟನೆ ಬಗ್ಗೆ ಸಂಜೆಯಾದರೂ ಮಾಲೀಕರು ವಿಷಯ ಮುಚ್ಚಿಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ರಾತ್ರಿಯಿಡೀ ಬಿದ್ದ ಮಳೆ ಅಥವಾ ಕಾರ್ಮಿಕರು ಬಳಸಿದ ಸ್ಫೋಟಕಗಳೇ ಕುಸಿತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದ್ದು, ಈ ಸಂಬಂಧ ತನಿಖೆ ನಡೆಯುತ್ತಿದೆ.