
ಬೆಳಗಾವಿ: ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಳಿಗೆ ತಲಾ ಒಂದೊಂದು ಕೋಟಿ ಪರಿಹಾರ ಕೊಡಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹಿಸಿದ್ದಾರೆ.

j3tvkannada
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಇನ್ನೂ ಹೆಚ್ಚಿನ ಪರಿಹಾರ ಕೊಡಬೇಕು ಅಂತಾ ನಾನು ಕೂಡ ಒತ್ತಾಯ ಮಾಡ್ತೀನಿ. ಸರ್ಕಾರ ಅಷ್ಟೇ ಅಲ್ಲ ಆರ್.ಸಿ.ಬಿ ಫ್ರಾಂಚೈಸಿ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಅವರೂ ಕೊಡಬೇಕು. ಬರೀ ಹತ್ತು ಲಕ್ಷ ಅಲ್ಲ ಒಂದೊಂದು ಕೋಟಿ ಪರಿಹಾರ ಕೊಡಬೇಕು ಅಂತ ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.
ಎಷ್ಟೇ ಪರಿಹಾರ ಕೊಟ್ರೂ ಸತ್ತ ಜೀವ ವಾಪಸ್ ತರಲು ಆಗಲ್ಲ. ವಿಪಕ್ಷದವರು ಜನರ ದಿಕ್ಕು ತಪ್ಪಿಸಲು ಏನು ಮಾಡಬೇಕೋ ಅದನ್ನ ಮಾಡ್ತಾರೆ. ನಮ್ಮ ಹಿರಿಯರು ಏನೇನು ಉತ್ತರ ಕೊಡಬೇಕೋ ಅದನ್ನು ಕೊಡ್ತಾರೆ. ಘಟನೆಯಲ್ಲಿ ಇಂಟಲಿಜೆನ್ಸ್ ತಪ್ಪಾಗಿದ್ರೇ ತನಿಖೆಯಿಂದ ಗೊತ್ತಾಗುತ್ತೆ ಅಂತ ಹೇಳಿದ್ದಾರೆ.
ದಿಢೀರನೆ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರಿಂದ ಅಭಿಮಾನಿಗಳ ಸುನಾಮಿಯೇ ಸೃಷ್ಟಿ ಆಯ್ತು. ಉಚಿತ ಪ್ರವೇಶ ಆಗಿದ್ದರಿಂದ ಕ್ರೀಡಾಂಗಣಕ್ಕೆ ಅಭಿಮಾನಿಗಳ ಸುನಾಮಿಯೆ ಹರಿದು ಬಂದಿತ್ತು. ಗೇಟ್ ನಂಬರ್ 18, 19, 20ರ ಬಳಿ ಅಭಿಮಾನಿ ಸಾಗರವನ್ನು ತಡೆಯಲು ಪೊಲೀಸರು ಹೈರಾಣಾಗಿ ಹೋದರು. ಒಂದು ಹಂತದಲ್ಲಿ ಲಾಠಿಯನ್ನೂ ಬೀಸಿದರು. ಕ್ಷಣ ಕ್ಷಣಕ್ಕೂ ಆರ್.ಸಿ.ಬಿ ಅಭಿಮಾನಿಗಳ ಸುನಾಮಿ ಹೆಚ್ಚುತ್ತಲೇ ಇತ್ತು. ಆದರೆ, ಗೇಟ್ ನಂ.12ರ ಬಳಿ ಗೇಟ್ ತೆಗೆಯುತ್ತಿದ್ದಂತೆಯೇ ಭಾರೀ ಪ್ರಮಾಣದಲ್ಲಿ ನೂಕು ನುಗ್ಗಲು ನಡೀತು. ಒಬ್ಬರ ಮೇಲೋಬ್ಬರು ಬಿದ್ದರು, ಉಸಿರಾಡೋಕೂ ಕೂಡ ಸಾಧ್ಯವಾಗಲಿಲ್ಲ. ತಕ್ಷಣವೇ ಗಾಯಗೊಂಡವರನ್ನು ಹತ್ತಿರದ ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆ ಮಣಿಪಾಲ್ಗೆ ದಾಖಲಿಸಲಾಯಿತು. ಆದರೆ, ಬೌರಿಂಗ್ ಆಸ್ಪತ್ರೆಯಲ್ಲಿ 6, ವೈದೇಹಿ ಆಸ್ಪತ್ರೆಯಲ್ಲಿ 4 ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.