
ವಿಜಯನಗರ: ಜ್ಞಾನವನ್ನು ಗಳಿಸುವುದರ ಜೊತೆಗೆ ಪಡೆದುಕೊಂಡ ಜ್ಞಾನವನ್ನು ಎಲ್ಲರ ಮುಂದೆ ಹೇಗೆ ಮಂಡಿಸಬೇಕು ಎಂಬುದು ಮುಖ್ಯ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗಂಭೀರವಾಗಿ ತೆಗೆದುಕೊಳ್ಳಿ ಓದು ನಿರಂತರವಾಗಿಬೇಕು ಮತ್ತು ಹೆಚ್ಚು ಶ್ರಮವಹಿಸಬೇಕು ಎಂದು ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

j3tvkannada
ಕನ್ನಡ ವಿಶ್ವವಿದ್ಯಾಲಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ವತಿಯಿಂದ ಪಂಪ ಸಭಾಂಗಣದಲ್ಲಿ 21 ದಿನಗಳ ಯು.ಜಿ.ಸಿ ನೆಟ್ ಮತ್ತು ಕೆ-ಸೆಟ್ ತರಬೇತಿ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡುತ್ತ ಚಿಕ್ಕವಯಸ್ಸಿನಲ್ಲೇ ಉನ್ನತ ಸ್ಥಾನ ಪಡೆಯುವ ಬಯಕೆ ನಿಮಗಿರಲಿ. ಸರ್ಕಾರ ನೀಡುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕುಲಸಚಿವ ಡಾ. ವಿಜಯ್ ಪೂಣಚ್ಚತಂಬಂಡ ಅವರು ಮಾತನಾಡುತ್ತ, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರಗಳು ಶೈಕ್ಷಣಿಕ ವಾತವರಣವನ್ನು ರೂಪಿಸುತ್ತವೆ. ಇದರ ಸದುಪಯೋಗಪಡಿಸಿಕೊಳ್ಳಿ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗಲಿಲ್ಲ ಎಂದ ಮಾತ್ರಕ್ಕೆ ಜೀವನದಲ್ಲಿ ಸೋತೆವೆಂದು ಅಲ್ಲ, ಅದರ ಆಚೆಗೆ ನಿಮ್ಮಲ್ಲಿರುವ ಜ್ಞಾನವನ್ನು ಬಳಸಿಕೊಂಡು ಬದುಕು ಕಟ್ಟಿಕೊಳ್ಳಿ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶಿರಹಟ್ಟಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಅನುಷಾ ಎಚ್.ಸಿ ಅವರು ಮಾತನಾಡುತ್ತ ವಿಶ್ವವಿದ್ಯಾಲಯಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ತರಬೇತಿಗಳನ್ನು ನಡೆಸುವುದು ತುಂಬಾ ವಿರಳ. ಆದರೆ ಕನ್ನಡ ವಿಶ್ವವಿದ್ಯಾಲಯವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಒತ್ತುಕೊಟ್ಟು ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಂಡಿರುವುದು ತುಂಬಾ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತುಂಬಾ ಮಹತ್ವದ ಕಾರ್ಯ. ದುಡಿಮೆಯಿಲ್ಲದ ಯಾವುದೇ ಪದವಿಗಳಿಗೆ ಬೆಲೆಯಿಲ್ಲ. ಈ ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳು ಪದವಿಗಳ ಜೊತೆಗೆ ಇಂತಹ ತರಬೇತಿ ಕಾರ್ಯಾಗಾರಗಳನ್ನು ಹಮ್ಮಿಕೊಂಡುವುದರಿಂದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗೆಲ್ಲಲ್ಲು ಸಾಧ್ಯ ಎಂದರು. ಸಮಾಜಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಯರ್ರಿಸ್ವಾಮಿ, ಸಾಹಿತ್ಯ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ.ವೆಂಕಟಗಿರಿ ದಳವಾಯಿ ಅವರು ಗಣ್ಯರನ್ನು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಶೋಧನಾರ್ಥಿಗಳು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.