
ಉತ್ತರಕನ್ನಡ: ಸರ್ಕಾರದ ಎಲ್ಲ ಯೋಜನೆಗಳು ಮತ್ತು ಸೌಲಭ್ಯಗಳು ಬಡ ಜನತೆಗೆ ತಲುಪಬೇಕು. ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆತು, ಸಮಾಜದ ಕಟ್ಟಕಡೆಯ ವ್ಯಕ್ತಿಯೂ ನೆಮ್ಮದಿಯಿಂದ ಜೀವನ ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಹೇಳಿದರು.

j3tvkannada
ಆರ್.ಸಿ.ಬಿ ವಿಜಯೋತ್ಸವದ ಸಮಯದಲ್ಲಿ ಸುಮಾರು 11 ಜನರು ಅಸುನೀಗಿದ್ದು ಇಂತಹ ಸಂದರ್ಭದಲ್ಲಿ ಯಾವುದೇ ಜನ್ಮದಿನ ಆಚರಿಸಬಾರದು ಎಂದು ನಿರ್ಧರಿಸಲಾಗಿತ್ತು. ದೇವರ ದರ್ಶನ ಪಡೆದು ಮನೆಗೆ ಬರುವಷ್ಟರಲ್ಲಿ ಸಾವಿರಾರು ಅಭಿಮಾನಿಗಳು ಕಾರ್ಯಕರ್ತರು ತನಗೆ ಆಶೀರ್ವದಿಸಲು, ಶುಭಾಶಯ ಹಂಚಿಕೊಳ್ಳಲು ನಿಂತುಕೊಂಡಿರುವುದನ್ನು ನೋಡಿ ಜನರ ಪ್ರೀತಿಗೆ ತಲೆಭಾಗ ಬೇಕಾಯಿತು. ನಾನು ಶಾಸಕನಾಗುತ್ತೇನೆ ಎಂದು ಯಾವಾಗಲೂ ಯೋಚಿಸಿರಲಿಲ್ಲ. ಅಚಾನಕ್ಕಾಗಿ ಈ ಅದೃಷ್ಟ ಒಲಿದು ಬಂದಿತ್ತು. ಬಳಿಕ ಶಾಸಕನಾಗಿ ಈಗ ಮಂತ್ರಿಯೂ ಆಗಿದ್ದೇನೆ. ನಿಮ್ಮ ಪ್ರೀತಿ, ಅಭಿಮಾನಕ್ಕೆ ತಾನು ಚಿರಋಣಿಯಾಗಿದ್ದೇನೆ ಎಂದರು.
ಕ್ಷೇತ್ರದಲ್ಲಿ ಯಾವುದೇ ವ್ಯಕ್ತಿ ಹಸಿವಿನಿಂದ, ವಿದ್ಯಾರ್ಥಿಗಳು ಶಿಕ್ಷಣದಿಂದ, ಯುವಕರು ನಿರುದ್ಯೋಗದಿಂದ ಅಲೆಯಬಾರದು. ಪ್ರವಾಸೋದ್ಯಮದ ಉನ್ನತೀಕರಣಕ್ಕಾಗಿ ಮುರ್ಡೇಶ್ವರದಲ್ಲಿ ಸುಮಾರು ₹400 ಕೋಟಿ ವೆಚ್ಚದಲ್ಲಿ ನೂತನ ಬಂದರು ನಿರ್ಮಾಣ ಕಾರ್ಯ ಶೀಘ್ರದಲ್ಲಿ ನೇರವೇರಲಿದೆ. ಇದರಿಂದ ಸ್ಥಳೀಯರಿಗೆ ಸ್ವಂತ ಉದ್ಯೋಗ ನಡೆಸಲು ಅವಕಾಶ ದೊರಯಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪತ್ನಿ ಪುಷ್ಪಲತಾ ವೈದ್ಯ, ಪುತ್ರಿ ಬೀನಾ ವೈದ್ಯ, ಸೋನಾಲಿ ವೈದ್ಯ ಮಂಕಾಳ ವೈದ್ಯರೊಂದಿಗೆ ಜನ್ಮದಿನದ ಆಚರಣೆಯಲ್ಲಿ ಪಾಲ್ಗೊಂಡರು. ಜಿಲ್ಲಾ ಮಟ್ಟದ ಅಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು ಸಚಿವರಿಗೆ ಶುಭ ಹಾರೈಸಿದರು.
ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ಮಾನವ ಜೀವ ಹಾನಿ ಆಗದಂತೆ ಅಗತ್ಯವಿರುವ ಎಲ್ಲ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಯಾವುದೇ ರೀತಿಯ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸುವ ಮೂಲಕ ಜಿಲ್ಲೆಯ ಸಾರ್ವಜನಿಕರ ರಕ್ಷಣೆಗೆ ಆದ್ಯತೆ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಪೂರ್ವ ಸಿದ್ಧತೆ ಕುರಿತು ಕೈಗೊಂಡಿರುವ ಕ್ರಮಗಳ ಕುರಿತು ವರ್ಚುವಲ್ ಮೂಲಕ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿನ ಶಾಲೆಗಳು ಮತ್ತು ಅಂಗನವಾಡಿ ಕಟ್ಟಡಗಳ ಬಳಿ ಇರುವ ಅಪಾಯಕಾರಿ ಮರಗಳನ್ನು ತಕ್ಷಣ ತೆರವುಗೊಳಿಸಬೇಕು. ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದರೆ ಪರ್ಯಾಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕು. ಅರಣ್ಯ ಇಲಾಖೆಯಿಂದ ಅಪಾಯಕಾರಿ ಮರಗಳನ್ನು ತಕ್ಷಣವೇ ತೆರವುಗೊಳಿಸುವ ಕಾರ್ಯ ಮಾಡಬೇಕು ಎಂದರು. ಮಳೆಯಿಂದ ಹಾನಿ ಸಂಭವಿಸಿದ್ದಲ್ಲಿ ಸಂಬಂದಪಟ್ಟವರಿಗೆ ತಕ್ಷಣವೇ ಪರಿಹಾರವನ್ನು ವಿತರಿಸಬೇಕು. ಸಂತ್ರಸ್ತರಿಗೆ ಪರಿಹಾರ ವಿತರಣೆ ಸಂದರ್ಭದಲ್ಲಿ ಅಂದಾಜು ಮಾಡುವ ನಷ್ಟವನ್ನು ಮಾನವೀಯ ನೆಲೆಯಲ್ಲಿ ಪರಿಗಣಿಸಿ, ಅವರಿಗೆ ಗರಿಷ್ಠ ಮೊತ್ತದ ಪರಿಹಾರ ವಿತರಣೆ ಮಾಡಬೇಕು. ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದ ಪರಿಹಾರ ವಿತರಣೆಗೆ ಯಾವುದೇ ಹಣಕಾಸಿನ ಕೊರತೆ ಇಲ್ಲವಾಗಿದ್ದು ಎಲ್ಲ ತಾಲೂಕುಗಳ ತಹಸೀಲ್ದಾರ್ ಗಳ ಖಾತೆಯಲ್ಲಿ ಸರಾಸರಿ 60 ರಿಂದ 70 ಲಕ್ಷ ರು. ಗಳ ಅನುದಾನವಿದ್ದು, ಇನ್ನೂ ಹೆಚ್ಚಿನ ಅನುದಾನದ ಅಗತ್ಯವಿದ್ದಲ್ಲಿ ಕೂಡಲೇ ಬಿಡುಗಡೆಗೊಳಿಸಲಾಗುವುದು ಎಂದರು.