
ಧಾರವಾಡ: ಕರ್ನಾಟಕ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಯು ಮಾರ್ಚ್ 21ರಿಂದ ಏಪ್ರಿಲ್ 24ರವರೆಗೆ ನಡೆಯಲಿದೆ. ಈ ಸಂಬಂಧ ಶಿಕ್ಷಣ ಇಲಾಖೆ ಅಧಿಕಾರಿಗಳು, ‘ಮಿಶನ್ ವಿದ್ಯಾಕಾಶಿ’ ಯೋಜನೆಯಡಿ ಹಲವಾರು ಕಾರ್ಯಕ್ರಮಗಳ ಆಯೋಜಿಸಿದ್ದಾರೆ. ಈ ಯೋಜನೆಯ ಮೂಲಕ, ಪರೀಕ್ಷೆ ಎದುರಿಸಲಿರುವ 10 ನೇ ತರಗತಿ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ತೆಗೆದು ಹಾಕುವಲ್ಲಿ ಸಫಲರಾಗಿದ್ದಾರೆ.

j3tvkannada.in
ಶಿಕ್ಷಣ ಇಲಾಖೆ ಅಧಿಕಾರಿಗಳು, ಪಾಲಕರು, ಹಾಗೂ ಶಿಕ್ಷಕರ ಪ್ರಯತ್ನದಿಂದಾಗಿ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟದಲ್ಲಿ ಸಾಕಷ್ಟು ಬದಲಾವಣೆ ಕಾಣುತ್ತಿದೆ. ವಿದ್ಯಾರ್ಥಿಗಳು ಓದಿನಲ್ಲಿ ಹೆಚ್ಚಿನ ಆಸಕ್ತಿವಹಿಸುತ್ತಿದ್ದಾರೆ. ಇದು ನಮಗೆಲ್ಲ ಹೆಮ್ಮೆ ಮೂಡಿಸಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.