
ಬಳ್ಳಾರಿ: ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯು ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಅವರ ಅಧ್ಯಕ್ಷತೆಯಲ್ಲಿ ಜೂನ್ 29 ರಂದು ಬಳ್ಳಿಗ್ಗೆ 9ಕ್ಕೆ ಸಂಡೂರಿನ ಆದರ್ಶ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.

j3tvkannada
ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರ ಬಗ್ಗೆ ಸಂಡೂರಿನಲ್ಲಿ ಚರ್ಚಿಸಿ, ನಿರ್ಣಯ ಕೈಗೊಂಡು, ಅದನ್ನು ಘೋಷಿಸುವ ಮೂಲಕ ಹೊಸ ಪರಂಪರೆಗೆ ನಾಂದಿ ಹಾಡಬೇಕು. ಸಮ್ಮೇಳನದ ಚಟುವಟಿಕೆಗಳಿಗೆ ಚಾಲನೆ ನೀಡಬೇಕು ಎಂದು ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ನಿಷ್ಠಿರುದ್ರಪ್ಪ ಕೋರಿದ್ದರು. ಅದರಂತೆ ಪರಿಷತ್ತಿನ ಗೌರವ ಕಾರ್ಯದರ್ಶಿಯವರು ಸಭೆ ಕುರಿತು ಸೂಚನ ಪತ್ರ ಹೊರಡಿಸಿದ್ದಾರೆ.
ಪರಿಷತ್ತಿನ ನಿಬಂಧನೆ ತಿದ್ದುಪಡಿ ಉದ್ದೇಶದಿಂದ ಸರ್ವ ಸದಸ್ಯರ ವಿಶೇಷ ಸಾಮಾನ್ಯ ಸಭೇಯು ಏಪ್ರಿಲ್ 27ರಂದು ಸಂಡೂರಿನ ನಂದಿಹಳ್ಳಿಯಲ್ಲಿ ನಿಗದಿಯಾಗಿತ್ತು. ಆಕ್ಷೇಪ ವ್ಯಕ್ತವಾದ ಕಾರಣ ಸಭೆ ಮುಂದೂಡಲ್ಪಟ್ಟಿತ್ತು.