
ರಾಮನಗರ: ಬೈಕ್ನಲ್ಲಿ ಹೋಗುತ್ತಿದ್ದ ಯುವಕ, ಯುವತಿಯನ್ನು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ನಡೆಸಿರುವುದು ರಾಮನಗರ ಹೊರವಲಯದ ಬೆಂಗಳೂರು-ಮೈಸೂರು ಹಳೇ ಹೆದ್ದಾರಿಯಲ್ಲಿ ನಡೆದಿದೆ. ಹಿಂದೂ ಯುವಕನ ಜತೆ ಮುಸ್ಲಿಂ ಯುವತಿ ಬೈಕ್ನಲ್ಲಿ ಹೋಗುತ್ತಿದ್ದ ಹಿನ್ನೆಲೆಯಲ್ಲಿ ಮತ್ತೊಂದು ಬೈಕ್ನಲ್ಲಿ ಬಂದ ಇಬ್ಬರು ಮುಸ್ಲಿಂ ಯುವಕರು ಬೈಕ್ ಅಡ್ಡಗಟ್ಟಿ ಬೆದರಿಕೆ ಹಾಕಿದ್ದಾರೆ. ಬೆಂಗಳೂರು-ಮೈಸೂರು ಹಳೇ ಹೆದ್ದಾರಿಯಲ್ಲಿ ಘಟನೆ ನಡೆದಿದೆ.

j3tvkannada.in
ಬೈಕ್ನಲ್ಲಿ ಹೋಗುತ್ತಿದ್ದ ಹಿಂದೂ ಯುವಕ, ಮುಸ್ಲಿ ಯುವತಿಯನ್ನು ಅಡ್ಡಗಟ್ಟಿರುವ ಮುಸ್ಲಿ ಯುವಕರು, ಇವನ್ಯಾರು ಎಂದು ಕೇಳಿದ್ದಾರೆ. ಆಕೆ ಸ್ನೇಹಿತ ಎಂದು ಹೇಳಿದಾಗ ಯಾಕೆ ಯುವತಿಯನ್ನು ಬೈಕ್ನಲ್ಲಿ ಕರೆದುಕೊಂಡು ಹೊಗುತ್ತಿದ್ದೀಯಾ? ಎಂದು ಯುವಕನನ್ನು ಕೇಳಿದ್ದಾರೆ. ಅಲ್ಲದೇ ಪೋಷಕರಿಗೆ ಫೋನ್ ಮಾಡು ಎಂದು ಯುವತಿಗೆ ಬೆದರಿಕೆ ಹಾಕಿರುವುದು ವಿಡಿಯೋದಲ್ಲಿದೆ.
ಮೊಬೈಲ್ನಲ್ಲಿ ವಿಡಿಯೋ ಮಾಡಿ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಈ ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದರಿಂದ ರಾಮನಗರ ಗ್ರಾಮಾಂತರ ಪೊಲೀಸರು, ಒಬ್ಬನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.