
ಕೊಪ್ಪಳ: ಇತ್ತೀಚೆಗೆ ಎಲ್ಲಿ ನೋಡಿದರೂ ಅತ್ಯಾಚಾರಗಳ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಕಾನೂನಿನ ಭಯವೇ ಇಲ್ಲದೆ ಕೆಲ ಕಿಡಿಗೇಡಿಗಳು ವಿಕೃತಿ ಮೆರೆಯುತ್ತಾರೆ. ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿಯಿರುವ ತುಂಗಭದ್ರಾ ಎಡದಂಡೆ ಕಾಲುವೆ ಬಳಿ ವಿದೇಶಿ ಮಹಿಳೆ, ಹೋಂ ಸ್ಟೇ ಮಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ದೇಶಾದ್ಯಂತ ಸುದ್ದಿಯಾಗಿತ್ತು.

ಈ ಪ್ರಕರಣದಿಂದ ಎಚ್ಚತ್ತ ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆ ಗಂಗಾವತಿ ತಾಲೂಕಿನ ಆನೆಗೊಂದಿ ಮತ್ತು ಕೊಪ್ಪಳ ತಾಲೂಕಿನ ಬಸ್ಸಾಪುರ ಸುತ್ತಮುತ್ತಲಿರುವ ಹೋಂ ಸ್ಟೇ, ರೆಸಾರ್ಟ್ಗಳ ಮೇಲೆ ಸೋಮವಾರ ದಾಳಿ ನಡೆಸಿದೆ. ಹೋಂ ಸ್ಟೇ, ರೆಸಾರ್ಟ್ಗಳು ವಿದೇಶಿಗರ ಬಗ್ಗೆ ಯಾವುದೇ ಮಾಹಿತಿ ನೀಡದ ಆರೋಪ ಮತ್ತು ಅಕ್ರಮ ಚಟುವಟಿಕೆ ನಡೆಯುತ್ತಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಅರಸಿದ್ದಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಹೋಂ ಸ್ಟೇ, ರೆಸಾರ್ಟ್ನಲ್ಲಿನ ರಿಜಿಸ್ಟರ್ ಪುಸ್ತಕ ಸೇರಿದಂತೆ ವಿವಿಧ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಮತ್ತು ಹೋಂ ಸ್ಟೇ, ರೆಸಾರ್ಟ್ನಲ್ಲಿ ಅಕ್ರಮ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸಂಪೂರ್ಣ ತಪಾಸಣೆ ನಡೆಸಿದರು. ಬಳಿಕ, ಹೋಂ ಸ್ಟೇ, ರೆಸಾರ್ಟ್ಗಳಲ್ಲಿ ಅಕ್ರಮ ಚಟುವಟಿಕೆ ನಡೆಸಿದರೇ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಾಲೀಕರಿಗೆ ಎಚ್ಚರಿಕೆ ನೀಡಿದರು.
ಎಸ್ಪಿ ಡಾ.ರಾಮ್ ಎಲ್ ಅರಸಿದ್ದಿ, ಗಂಗಾವತಿಯಲ್ಲಿ ರೆಸಾರ್ಟ್ ಮಾಲೀಕರ ಜೊತೆ ಸಭೆ ನಡೆಸಿದ್ದರು ಪಾರ್ಮ್ ಸಿ ಯನ್ನು ಕಡ್ಡಾಯವಾಗಿ ಭರ್ತಿ ಮಾಡಿ, ವಿದೇಶಿಗರ ಬಗ್ಗೆ ಮಾಹಿತಿ ನೀಡಬೇಕು. ಅನೈತಿಕ ಚಟುವಟಿಕೆಗಳನ್ನು ನಡೆಸಬಾರದು ಎಂದು ರೆಸಾರ್ಟ್ ಮಾಲೀಕರಿಗೆ ಖಡಕ್ ಸೂಚನೆ ನೀಡಿದ್ದಾರೆ. ಪೊಲೀಸರು ದಾಖಲೆಗಳನ್ನು ಪರಿಶೀಲಿಸಿ, ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ. ಅಕ್ರಮ ಚಟುವಟಿಕೆಗಳನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಲಾಗಿದೆ.