ಕೋಲಾರ: ಶ್ರೀನಿವಾಸಪುರ ತಾಲ್ಲೂಕಿನ ಗುಂಟಪಲ್ಲಿ ಕ್ರಾಸ್ ಬಳಿ ಮಂಗಳವಾರ ರಾತ್ರಿ ಎರಡು ಖಾಸಗಿ ಬಸ್ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮೃತ ವ್ಯಕ್ತಿಯನ್ನು ಆಂಧ್ರಪ್ರದೇಶದ ಮದನಪಲ್ಲಿ ಮೂಲದ ಗಂಗಾಧರ್ ಎಂದು ಗುರುತಿಸಲಾಗಿದೆ.
ಒಂದು ಬಸ್ ಮತ್ತೊಂದು ವಾಹನವನ್ನು ಹಿಂದಿಕ್ಕಲು ಪ್ರಯತ್ನಿಸುತ್ತಿದ್ದಾಗ ಮುಖಾಮುಖಿ ಡಿಕ್ಕಿ ಸಂಭವಿಸಿದೆ, ಚಾಲಕನ ಅತಿಯಾದ ವೇಗವೆ ಅಪಘಾತಕ್ಕೆ, ಕಾರಣ ಎಂದು ಪ್ರಯಾಣಿಕರು ತಿಳಿಸಿದ್ದಾರೆ. ಗಾಯಾಳುಗಳನ್ನು ಮದನಪಲ್ಲಿ ಮತ್ತು ಕೋಲಾರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ರಾಯಲ್ಪಾಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.