
ಚಾಮರಾಜನಗರ: ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಕೊರತೆ ಇರುತ್ತದೆ ಮಕ್ಕಳಿಗೆ ಕ್ವಾಲಿಟಿ ಶಿಕ್ಷಣ ಸಿಗಲ್ಲ ಎಂಬ ಕಾರಣದಿಂದ ಪೋಷಕರು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುತ್ತಿದ್ದಾರೆ. ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಇದಕ್ಕೆ ತದ್ವಿರುದ್ಧ ಎಂಬ ರೀತಿಯಲ್ಲಿ ಈ ಬಾರಿಯ ಶೈಕ್ಷಣಿಕ ವರ್ಷದಲ್ಲಿ ಹೆಚ್ಚು ಮಕ್ಕಳು ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಪಡೆದಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ 20 ಕ್ಕೂ ಹೆಚ್ಚು ಸರ್ಕಾರಿ ಶಾಲೆ ಮುಚ್ಚಿದ್ದವು.

j3tvkannada
ಕಟ್ಟಡದ ಕೊರತೆ, ಶಿಕ್ಷಕರ ಕೊರತೆ, ಮೂಲಭೂತ ಸೌಕರ್ಯ ಕೊರತೆಯಿದೆ ಎಂದು ಪೋಷಕರು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸುತ್ತಿದ್ದರು. ಈ ಬಾರಿ ಪರಿಸ್ಥಿತಿ ಸ್ವಲ್ಪ ಬದಲಾಗಿದ್ದು, ಸರ್ಕಾರಿ ಶಾಲೆಗಳತ್ತ ಪೋಷಕರು ಸ್ವಲ್ಪ ಮಟ್ಟಿಗೆ ಒಲವು ತೋರಿದ್ದಾರೆ. ಸರ್ಕಾರಿ ಶಾಲೆಗಳತ್ತ ಮಕ್ಕಳು ಬರಲು, ಪೋಷಕರು ಒಲವು ತೋರಲು ಅನೇಕ ಕಾರಣಗಳಿಗಳಿವೆ. ಇದಕ್ಕೆ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್.ಕೆ.ಜಿ, ಯು.ಕೆ.ಜಿ ಆರಂಭಿಸಿರುವುದು ಪ್ರಮುಖ ಕಾರಣವಾಗಿದೆ.
ಅಲ್ಲದೆ ಸಾಕಷ್ಟು ಶಾಲೆಗಳನ್ನು ಸಿ.ಆರ್.ಎಸ್ ಫಂಡ್ ಮೂಲಕ ಅಭಿವೃದ್ಧಿಪಡಿಸಲಾಗಿದೆ. ಶಿಕ್ಷಕರ ಕೊರತೆ ಕೂಡ ನೀಗಿಸುವ ಕೆಲಸವಾಗಿದೆ. ಶಾಲೆಗಳ ಕಟ್ಟಡ ದುರಸ್ತಿ ಸರಿಪಡಿಸಿಕೊಡಲಾಗಿದೆ. ಈ ಎಲ್ಲ ಕಾರಣಗಳಿಂದ ಮಕ್ಕಳು ಸರ್ಕಾರಿ ಶಾಲೆಗಳಿಗೆ ಬರುತ್ತಿದ್ದಾರೆ. ಸರ್ಕಾರಿ ಶಾಲೆ ಅಂದ್ರೆ ಸಾಕು ಈಗಿನ ಪೋಷಕರು ಮಕ್ಕಳನ್ನು ದಾಖಲು ಮಾಡಲು ಹಿಂದೇಟು ಹಾಕುತ್ತಿರುವವರ ನಡುವೆ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗಕ್ಕೆ ಮಕ್ಕಳನ್ನು ಹೆಚ್ಚು ದಾಖಲಾತಿ ಮಾಡುತ್ತಿರುವುದು ಮಾತ್ರ ಒಂದು ಆಶಾದಾಯಕ ಬೆಳವಣಿಗೆಯೇ ಸರಿ.