
ಬೆಳಗಾವಿ: ಭೀಕರ ಸರಣಿ ಅಪಘಾತಕ್ಕೆ ಮೂವರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಅಥಣಿ ಹೊರವಲಯದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಇದರಲ್ಲಿ ಪ್ರಾಣ ಉಳಿಸಲು ಹೋಗಿ ಓರ್ವ ಬಲಿಯಾಗಿದ್ದಾನೆ. ವಿಜಯಪುರ ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿ ಮೇಲೆ ಈ ಭೀಕರ ಅಪಘಾತ ನಡೆದಿದೆ.

j3tvkannada
ಲಾರಿ, ಪಿಕಪ್ ವಾಹನ, ಸ್ಕಾರ್ಪಿಯೋ ಹಾಗೂ ಎರ್ಟಿಗಾ ಕಾರಿನ ನಡುವೆ ಅಪಘಾತವಾಗಿದೆ. ಅತಿಯಾದ ವೇಗ ಮತ್ತು ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಮಹಾರಾಷ್ಟ್ರದ ಕೊಲ್ಲಾಪುರ ಮತ್ತು ಸಾಂಗ್ಲಿ ಜಿಲ್ಲೆಗಳ ವ್ಯಕ್ತಿಗಳು ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ. ಅಥಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.