
ಯಾದಗಿರಿ: ಜಿಲ್ಲೆಯ ಬಸವಸಾಗರ ಜಲಾಶಯದಲ್ಲಿ ಒಳಹರಿವು ಹೆಚ್ಚಾಗಿದ್ದು ಕೃಷ್ಣಾ ನದಿಗೆ 5 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ.

j3tvkannada
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯ 33.33 ಟಿ.ಎಂ.ಸಿ ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಸದ್ಯ ಜಲಾಶಯದಲ್ಲಿ 27.80 ಟಿ.ಎಂ.ಸಿ ನೀರು ಸಂಗ್ರಹವಾಗಿದೆ.
ಸದ್ಯ ಜಲಾಶಯಕ್ಕೆ 20 ಸಾವಿರ ಕ್ಯೂಸೆಕ್ ನೀರಿನ ಒಳಹರಿವು ಇದ್ದು, ಒಂದು ಗೇಟ್ ಮೂಲಕ ಕೃಷ್ಣಾ ನದಿಗೆ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಜೊತೆಗೆ ನದಿ ಪಾತ್ರದ ಜನರು ನದಿ ತೀರಕ್ಕೆ ತೆರಳದಂತೆ ಹಾಗೂ ಜಾನುವಾರುಗಳನ್ನು ನದಿ ತೀರಕ್ಕೆ ಕರೆದುಕೊಂಡು ಹೋಗದಂತೆ ಕೃಷ್ಣಾ ಭಾಗ್ಯ ನಿಗಮ ಲಿಮಿಟೆಡ್ನ ಅಧಿಕಾರಿಗಳು ಸೂಚಿಸಿದ್ದಾರೆ.