
ರಾಮನಗರ: ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯು ಸಿಂಗರಾಜಿಪುರ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ. ಮದ್ದೂರು ತಾಲೂಕಿನ ಅಂಬರಹಳ್ಳಿ ಗ್ರಾಮದ ಮಹಾಲಕ್ಷ್ಮೀ ಮೃತ ವಿದ್ಯಾರ್ಥಿನಿ.

j3tvkannada
ರಾಮನಗರದ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡ್ತಿದ್ದು, ಗುರುವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದರು. ಬಳಿಕ ಸಂಜೆಯ ಹೊತ್ತಿಗೆ ಸಿಂಗರಾಜಿಪುರ ಕೆರೆಯ ದಡದಲ್ಲಿ ವಿದ್ಯಾರ್ಥಿನಿಯ ಐಡಿ ಕಾರ್ಡ್, ಬ್ಯಾಗ್ ಪತ್ತೆಯಾಗಿತ್ತು. ಈ ಹಿನ್ನೆಲೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕೆರೆಯಲ್ಲಿ ಹುಡುಕಾಟ ನಡೆಸಿದ್ದರು.
ಶುಕ್ರವಾರ ಕೆರೆಯಲ್ಲಿ ವಿದ್ಯಾರ್ಥಿನಿ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.