
ಕರ್ನಾಟಕ: ರಾಜ್ಯದಲ್ಲಿ ಮುಂದಿನ ಐದು ದಿನ ಬಿರುಗಾಳಿ, ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ. ಜೂನ್ 14ರಂದು ಕರಾವಳಿ ಜಿಲ್ಲೆಗಳು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ. ಇನ್ನು ಉಳಿದ ಹಾಸನ, ಮೈಸೂರು, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಬೆಂಗಳೂರು ಸೇರಿ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಕರಾವಳಿ ಜಿಲ್ಲೆಗಳಲ್ಲಿ ಜೂನ್ 17ರವರೆಗೆ ಬಿರುಗಾಳಿಯು ಗಂಟೆಗೆ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

j3tvkannada
ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಹಾಗೆಯೇ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬೀದರ್, ಕಲಬುರಗಿ, ಯಾದಗಿರಿ, ಬಾಗಲಕೋಟೆ, ರಾಯಚೂರು, ಗದಗ, ಹಾವೇರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿಯಲಿದೆ. ಅದೇ ರೀತಿ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ, ರಾಮನಗರ, ದಾವಣಗೆರೆ ಜಿಲ್ಲೆಯಲ್ಲಿ ಬಿರುಸಿನ ಮಳೆಯಾಗುವ ಸಂಭವ ಇದೆ.
ಇನ್ನು ಬೆಂಗಳೂರು ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಹಾಸನ, ಶಿವಮೊಗ್ಗ, ಹಾವೇರಿ, ಧಾರವಾಡ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಜೂನ್ 15ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಸೇರಿ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಿದ್ದು, ಹಾಸನ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೂನ್ 16ರಂದು ಕರಾವಳಿ ಜಿಲ್ಲೆಗಳು, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಸೇರಿ ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಳಿದಂತೆ ಬೆಂಗಳೂರು, ಮೈಸೂರು ಸೇರಿ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.