
ಉತ್ತರಕನ್ನಡ: ಎರಡು ದಿನಗಳ ಹಿಂದೆ ವೃದ್ಧೆ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದ ಆರೋಪಿ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬಂಧನದ ವೇಳೆ ಈತ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದು, ಮತ್ತೆ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಕೊನೆಗೆ ಪೊಲೀಸರು ವಿಧಿಯಿಲ್ಲದೇ ಆತನ ಕಾಲಿಗೆ ಗುಂಡು ಹಾರಿಸಿ, ಆತನನ್ನು ಅರೆಸ್ಟ್ ಮಾಡಿದ್ದಾರೆ. ಇನ್ನು ಬಂಧಿತ ಆರೋಪಿಯನ್ನು ಫೈರೋಜ್ ಯರಗಟ್ಟಿ (23) ಎಂದು ಗುರುತಿಸಲಾಗಿದೆ. ಆರೋಪಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ನಾರಾಯಣ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

j3tvkannada
ಉತ್ತರ ಕನ್ನಡದ ಬೈಲಪಾರು ಐ.ಪಿ.ಎಂ ಪ್ರದೇಶದ ಅರಣ್ಯ ಪ್ರದೇಶದಲ್ಲಿ ಫೈರೋಜ್ ಬೈಲಪಾರು ಐ.ಪಿ.ಎಂ ಪ್ರದೇಶದ ಅರಣ್ಯ ಪ್ರದೇಶದಲ್ಲಿ 60 ವರ್ಷದ ಅಂಗವಿಕಲ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ್ದ. ಅತ್ಯಾಚಾರ ಮಾಡಿ ಮೊಬೈಲ್ ಹಾಗೂ ₹5,000 ಕಳವು ಮಾಡಿ ಪರಾರಿಯಾಗಿದ್ದಾಗಿ ಪೊಲೀಸರು ತಿಳಿಸಿದ್ದರು.
ಆರೋಪಿಯನ್ನು ಪತ್ತೆ ಹಚ್ಚಲು ಸುಮಾರು ನೂರು ಜನರ ಪೋಟೋ ತೋರಿಸಿದ ನಂತರ ವೃದ್ಧೆ, ಆರೋಪಿಯ ಗುರುತು ಪತ್ತೆ ಮಾಡಿದ್ದಳು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕುಳಗಿ ಅರಣ್ಯ ಪ್ರದೇಶದಲ್ಲಿ ಎಸ್.ಐ ಕಿರಣ್ ಪಾಟೀಲ ನೇತೃತ್ವದ ತಂಡವು ಪತ್ತೆ ಹಚ್ಚಿ ಕರೆದುಕೊಂಡು ಬರುತ್ತಿರುವಾಗ ಪೋಲಿಸರ ಮೇಲೆ ಏಕಾಏಕಿ ಕಲ್ಲು ಮತ್ತು ಚಾಕುವಿನಿಂದ ದಾಳಿ ಮಾಡಿದ್ದಾನೆ ಎನ್ನಲಾಗಿದೆ. ಹೀಗಾಗಿ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಲಾಗಿದೆ.