
ಬೆಂಗಳೂರು:ವಾಟ್ಸಪ್ನಲ್ಲಿ ಮಹಿಳೆಯ ಬೆತ್ತಲೆ ವಿಡಿಯೋ ರೆಕಾರ್ಡ್ ಮಾಡಿಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಕೇರಳದ ತ್ರಿಶೂರ್ನ ಪ್ರತಿಷ್ಠಿತ ದೇವಾಲಯದ ಅರ್ಚಕನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ.

j3tvkannada
ಪ್ರತಿಷ್ಠಿತ ಪೆರಿಗೊಟ್ಟುಕ್ಕಾರ ದೇವಾಲಯದ ಅರ್ಚಕ ಅರುಣ್ ಬಂಧಿತ ಆರೋಪಿ. ಪ್ರಕರಣ ಬೆಳಕಿಗೆ ಬಂದ ಬಳಿಕ ಮುಖ್ಯ ಅರ್ಚಕ ಉನ್ನಿ ದಾಮೋದರನ್ ಪರಾರಿಯಾಗಿದ್ದಾನೆ. ಮಹಿಳೆಯೊಬ್ಬರು ತನಗೆ ಮಾಟಮಂತ್ರ ಮಾಡಿಸಿದ್ದಾರೆಂದು ದೇವಸ್ಥಾನಕ್ಕೆ ತೆರಳಿದ್ದರು. ಈ ವೇಳೆ ದೇವಾಲಯದ ಅರ್ಚಕ ಅರುಣ್ ಪರಿಚಯ ಆಗಿತ್ತು. 24,000 ರೂ. ಕೊಟ್ಟರೆ ಪೂಜೆ ಮಾಡೋದಾಗಿ ಅರುಣ್ ಹೇಳಿದ್ದ. ಬಳಿಕ ಮಹಿಳೆ ನಂಬರ್ ಪಡೆದು ಹೇಳಿದ ದಿನ ಬರುವಂತೆ ಸೂಚನೆ ಕೊಟ್ಟಿದ್ದ. ಇದಾದ ಬಳಿಕ, ಮಹಿಳೆಗೆ ತಡರಾತ್ರಿಯಲ್ಲಿ ನಿರಂತರ ವಾಟ್ಸಪ್ ಕರೆ ಮಾಡುತ್ತಿದ್ದ. ತಾನು ಬೆತ್ತಲೆಯಾಗಿ ನಿಂತು ವಿಡಿಯೋ ಕರೆ ಮಾಡುತ್ತಿದ್ದ. ಅಲ್ಲದೇ ನಿಮಗೆ ಮಾಡಿರುವ ಮಾಟ ಮಂತ್ರ ಪರಿಹಾರ ಆಗಬೇಕಾದರೆ ಸಂಪೂರ್ಣ ಬೆತ್ತಲಾಗುವಂತೆ ಪೀಡಿಸುತ್ತಿದ್ದ.
ಮಹಿಳೆ ಇದನ್ನು ನಿರಾಕರಿಸಿದ್ದಕ್ಕೆ ಬೆತ್ತಲಾಗಿಲ್ಲ ಅಂದರೆ ನಿನ್ನ ಇಬ್ಬರು ಮಕ್ಕಳು ಸಾಯೋ ಹಾಗೆ ರಿಟರ್ನ್ ಪೂಜೆ ಮಾಡ್ತೀನಿ ಎಂದು ಬೆದರಿಕೆ ಹಾಕಿದ್ದ. ಅರ್ಚಕನ ಬೆದರಿಕೆಯಿಂದ ಮಹಿಳೆ ಬೆತ್ತಲಾಗಿದ್ದಳು. ಬಳಿಕ ಬೆತ್ತಲೆ ಆಗಿರೋದನ್ನು ಅರ್ಚಕ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದ. ನಂತರ ಆ ವಿಡಿಯೋ ಇಟ್ಟುಕೊಂಡು ಕರೆದಾಗಲೆಲ್ಲ ಕೇರಳಕ್ಕೆ ಬರುವಂತೆ ಒತ್ತಾಯ ಮಾಡುತ್ತಿದ್ದ. ನೀನು ಬರುವಾಗ ಹೇಳು ರೂಂ ಬುಕ್ ಮಾಡ್ತೀನಿ ಎಂದು ಚಿತ್ರಹಿಂಸೆ ಕೊಡುತ್ತಿದ್ದ. ಇದರಿಂದ ಬೇಸತ್ತ ಮಹಿಳೆ ಅರ್ಚಕ ಅರುಣ್ ಹಾಗೂ ಮುಖ್ಯ ಅರ್ಚಕ ಉನ್ನಿ ದಾಮೋದರ್ ವಿರುದ್ಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಅಸಭ್ಯ ವರ್ತನೆ ಮತ್ತು ಕಾರಿನಲ್ಲಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆ ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಅರ್ಚಕ ಅರುಣ್ನನ್ನು ಬಂಧಿಸಿದ್ದಾರೆ. ಮುಖ್ಯ ಅರ್ಚಕ ಉನ್ನಿ ದಾಮೋದರನ್ ಪರಾರಿಯಾಗಿದ್ದು, ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.