
ಹಾಸನ:ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಮಲೆನಾಡು ಭಾಗದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಸಕಲೇಶಪುರ, ಆಲೂರು, ಬೇಲೂರು ಭಾಗದಲ್ಲಿ ಬಿರುಗಾಳಿ ಸಹಿತ ಧಾರಾಕಾರವಾಗಿ ಮಳೆಯಾಗುತ್ತಿದೆ.

j3tvkannada
ಭಾರೀ ಮಳೆಯಿಂದಾಗಿ ಜನರ ಜೀವನ ಅಸ್ತವ್ಯಸ್ತಗೊಂಡಿದ್ದು, ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣವಿದೆ. ಸಕಲೇಶಪುರ, ಚಿಕ್ಕಮಗಳೂರು ಭಾಗಗಳಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ ಹಾಸನ ತಾಲ್ಲೂಕಿನ, ಗೊರೂರಿನಲ್ಲಿರುವ ಜಿಲ್ಲೆಯ ಜೀವನದಿ ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ.
ಭಾನುವಾರದವರೆಗೂ 1,907 ಕ್ಯೂಸೆಕ್ ಒಳಹರಿವಿದ್ದು, ಇಂದು 4,642 ಕ್ಯೂಸೆಕ್ ಒಳಹರಿವು ಹೆಚ್ಚಳವಾಗಿದೆ. ಹೇಮಾವತಿ ಜಲಾಶಯಕ್ಕೆ ಒಟ್ಟು 6,549 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ನದಿ, ನಾಲೆಗಳು ಸೇರಿ ಒಟ್ಟು 350 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.