
ಕೊಪ್ಪಳ, : ಕೊಪ್ಪಳ ಜಿಲ್ಲೆಯ ಹುಲಗಿ ಗ್ರಾಮದಲ್ಲಿರುವ ಪ್ರಸಿದ್ಧ ಹುಲಿಗೆಮ್ಮ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಕೇವಲ 40 ದಿನಗಳಲ್ಲಿ ಬರೋಬ್ಬರಿ 99.21 ಲಕ್ಷ ರೂ. ಹಣ ಸಂಗ್ರಹವಾಗಿದೆ. ಜೊತೆಗೆ 216 ಗ್ರಾಂ ಬಂಗಾರ, 11.5 ಕೆಜಿ ಬೆಳ್ಳಿ ಆಭರಣ ಸಂಗ್ರಹವಾಗಿದೆ. ಪ್ರತಿ ನಿತ್ಯ ಈ ದೇವಸ್ತಾನಕ್ಕೆ, ರಾಜ್ಯ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಬಂದು ದೇವಿಯ ದರ್ಶನ ಪಡೆಯುತ್ತಾರೆ.

25 ಲಕ್ಷಕ್ಕಿಂತ ಅಧಿಕ ಆದಾಯ ಇರುವ ಎಲ್ಲಾ ದೇವಾಲಯಗಳಲ್ಲೂ, ಅಮೂಲಾಗ್ರ ಬದಲಾವಣೆ ಮಾಡಿ ಎಲ್ಲಾ ರೀತಿಯ ಸೌಕರ್ಯ ಒದಗಿಸುವ ಕೆಲಸ ಸರ್ಕಾರ ಮಾಡಬೇಕಿದೆ. ಈ ಬಾರಿ ಕೊಪ್ಪಳದ ಶ್ರೀ ಹುಲಿಗೆಮ್ಮ ದೇವಾಲಯಕ್ಕೆ ಪ್ರಾಧಿಕಾರ ರಚನೆಯಾಗುವ ನಿರೀಕ್ಷೆ ಇದೆ.